ಕೊಪ್ಪಳ ಜಿಲ್ಲೆಗೆ 4ಜಿ ಬಿಎಸ್‌ಎನ್‌ಎಲ್ ಟವರ್ ಮಂಜೂರುಲ; ಸಂಸದ ಕರಡಿ ಸಂಗಣ್ಣ ಮಾಹಿತಿ

18082022 kknr
Published on

ಕೊಪ್ಪಳ: ಜಿಲ್ಲೆಯ ಸಾರ್ವಜನಿಕರ ಅನುಕೂಲಕ್ಕಾಗಿ ಮನವಿ ಮಾಡಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಜಿಲ್ಲೆಯ ಐದು ತಾಲೂಕುಗಳಿಗೆ 4ಜಿ ಕವರೇಜ್ ಬಿಎಸ್‌ಎನ್‌ಎಲ್ ಟವರ್‌ಗಳನ್ನು ಮಂಜೂರು ಮಾಡಿದೆ ಎಂದು ಸಂಸದ ಸಂಗಣ್ಣ ಕರಡಿ ತಿಳಿಸಿದ್ದಾರೆ. ಕೊಪ್ಪಳ ತಾಲೂಕಿನ ಹಳೆಕುಮಟಾ, ಕಾರಟಗಿಯ ನಾಗನಕಲ್, ಕನಕಗಿರಿಯ ಬೊಮ್ಮಸಾಗರ, ಗಂಗಾವತಿಯ ತೆಂಬಾ, ಕುಷ್ಟಗಿ ತಾಲೂಕಿನ ಕೃಷ್ಣನಗರಕ್ಕೆ 4ಜಿ ಕವರೇಜ್ ಬಿಎಸ್‌ಎನ್‌ಎಲ್ ಟವರ್‌ಗಳನ್ನು ಮಂಜೂರು ಮಾಡಿದೆ. ಕೊಪ್ಪಳ ನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಜೀರ್ಣೋದ್ಧಾರಕ್ಕಾಗಿ ಸಿಎಂ ಬಸವರಾಜ ಬೊಮ್ಮಾಯಿ ಒಂದು ಕೋಟಿ ರೂ. ಅನುದಾನ ಮಂಜೂರು ಮಾಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net