ಅಭ್ಯರ್ಥಿ ಆಯ್ಕೆ ಶುರುವಿಟ್ಟ ಕಾಂಗ್ರೆಸ್: ಕೊಪ್ಪಳದಲ್ಲಿ ಡಿ.26ರಂದು ಸಮಿತಿಯಿಂದ ಗುಪ್ತ ಸಭೆ

Congress logo-1582758001
Published on

ಕೊಪ್ಪಳ: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿರುವ ಕೈ ಹೈಕಮಾಂಡ್ ಅರ್ಜಿ ಸಲ್ಲಿಸಿದವರ ಪೈಕಿ ಯಾರನ್ನು ಅಂತಿಮಗೊಳಿಸಬೇಕೆಂಬ ಅಭಿಪ್ರಾಯ ಸಂಗ್ರಹಿಸಲು ಡಿ.26ರಂದು ಆಯ್ಕೆ ಸಮಿತಿ ಜಿಲ್ಲೆಗೆ ಆಗಮಿಸಲಿದೆ.

ಜಿಲ್ಲೆಯ ಐದು ಕ್ಷೇತ್ರಗಳಿಗೆ ಟಿಕೆಟ್‌ಗಾಗಿ 11 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಆದಾಗ್ಯೂ ಹಾಲಿ ಶಾಸಕರಾದ ಅಮರೇಗೌಡ ಬಯ್ಯಪುರ, ರಾಘವೇಂದ್ರ ಹಿಟ್ನಾಳ್, ಮಾಜಿ ಸಚಿವರಾದ ಶಿವರಾಜ ತಂಗಡಗಿ, ಇಕ್ಬಾಲ್ ಅನ್ಸಾರಿ, ಬಸವರಾಜ ರಾಯರಡ್ಡಿಗೆ ಟಿಕೆಟ್ ಪಕ್ಕಾ ಎಂಬುದನ್ನು ಮಾಜಿ ಸಿಎಂ ಸಿದ್ದರಾಮಯ್ಯ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಕೆಪಿಸಿಸಿ ಸೂಚನೆ ಹಿನ್ನೆಲೆಯಲ್ಲಿ ಅಭ್ಯರ್ಥಿ ಆಯ್ಕೆ ಸಭೆ ನೆಪದಲ್ಲಿ ಮತ್ತೊಂದು ಸುತ್ತಿನ ಸಂಘಟನೆಗೆ ಡಿಸಿಸಿ ಮುಂದಾಗಿದ್ದು, ಡಿ.26ರಂದು ದಿನಾಂಕ ನಿಗದಿಪಡಿಸಿದೆ.

ಎಐಸಿಸಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶ್ರೀಧರ ಬಾಬು, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಚುನಾವಣಾ ಸಮಿತಿ ಸದಸ್ಯ ಶರಣಪ್ಪ ಸುಣಗಾರ, ಡಿಸಿಸಿ ಅಧ್ಯಕ್ಷ ಶಿವರಾಜ ತಂಗಡಗಿ, ಲೋಕಸಭೆ ಪರಾಜಿತ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ್, ಜಿಲ್ಲಾ ಉಸ್ತುವಾರಿ ಸಂತೋಷ ಲಾಡ್, ಬಸನಗೌಡ ಬಾದರ್ಲಿ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿ ಸಭೆ ನಡೆಯಲಿದೆ. ಸಭೆಯಲ್ಲಿ ಹಾಲಿ, ಮಾಜಿ ಶಾಸಕರು, ವಿವಿಧ ಸಮಿತಿ ಪದಾಧಿಕಾರಿಗಳು, ಸದಸ್ಯರು ಭಾಗಿಯಾಗಲಿದ್ದು, ಗುಪ್ತವಾಗಿ ತಮ್ಮ ಅಭಿಪ್ರಾಯ ಹಂಚಿಕೊಳ್ಳುವಂತೆ ಸಲಹೆ ನೀಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net