ಹುಲಿಗಿ, ಹಿಟ್ನಾಳ್ ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರ

24KKNR-06
Published on

ಕೊಪ್ಪಳ: ತಾಲೂಕಿನ ಹುಲಿಗಿ ಹಾಗೂ ಹಿಟ್ನಾಳ್ ಗ್ರಾಮ ಪಂಚಾಯಿತಿಗೆ ಗಾಂಧಿ ಪುರಸ್ಕಾರ ಪ್ರಶಸ್ತಿ ಲಭಿಸಿದ್ದು, ಶುಕ್ರವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಂಚಾಯಿತಿ ಅಧ್ಯಕ್ಷರು, ಅಧಿಕಾರಿಗಳು ಪ್ರಶಸ್ತಿ ಸ್ವೀಕರಿಸಿದರು.

ಹಿಟ್ನಾಳ್ ಗ್ರಾಪಂಗೆ 2020-21ನೇ ಸಾಲಿನ ಹಾಗೂ ಹುಲಿಗಿ ಪಂಚಾಯಿತಿಗೆ 2021-22 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರವನ್ನು ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಗ್ರಾಮೀಣಾಭೀವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಹಾಗೂ ಉಮಾ ಮಹಾದೇವನ್ ಪ್ರಶಸ್ತಿ ನೀಡಿ ಗೌರವಿಸಿದರು. ಜಿಪಂ ಯೋಜನಾ ನಿರ್ದೇಶಕ ಟಿ.ಕೃಷ್ಣಮೂರ್ತಿ, ತಾಪಂ ಇಒ ದುಂಡಪ್ಪ ತುರಾದಿ, ಪಿಡಿಒಗಳಾದ ಕೃಷ್ಣಮೂರ್ತಿ ಹಲಗೇರಿ, ಪರಮೇಶ್ವರಯ್ಯ ತೆಳಗಡೆಮಠ ಸೇರಿದಂತೆ ಗ್ರಾಪಂ ಅಧ್ಯಕ್ಷರು, ಸದಸ್ಯರು ಪಾಲ್ಗೊಂಡಿದ್ದರು. ಎರಡು ಗ್ರಾಪಂಗಳಿಗೆ ಗಾಂಧಿ ಗ್ರಾಮ ಪುರಸ್ಕಾರ ದೊರೆತಿರುವುದಕ್ಕೆ ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ ಸಂತಸ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net