ಸಂವಿಧಾನ ಸಂರಕ್ಷಣೆಗಾಗಿ ಜೈ ಭೀಮ ಜಾಗೃತಿ ಜಾಥಾ: ಬಿಎಸ್ಪಿ ಜಿಲ್ಲಾಧ್ಯಕ್ಷ ಮೈಲಾರಪ್ಪ ಮಾಹಿತಿ

10102022 koppal mylarappa
Published on

ಕೊಪ್ಪಳ: ಸಂವಿಧಾನ ಸಂರಕ್ಷಣೆಗಾಗಿ ರಾಜ್ಯವ್ಯಾಪಿ ಜೈ ಭೀಮ ಜನಜಾಗೃತಿ ಜಾಥಾ ಆರಂಭಿಸಿದ್ದು, ಅ.11ರಂದು ಜಿಲ್ಲೆಗೆ ಆಗಮಿಸಲಿದೆ ಎಂದು ಬಹುಜನ ಸಮಾಜ ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಸ್.ಮೈಲಾರಪ್ಪ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಜನರಲ್ಲಿ ಸಂವಿಧಾನದ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಪಕ್ಷದಿಂದ ಜಾಥಾ ಹಮ್ಮಿಕೊಳ್ಳಲಾಗಿದೆ. ಅ.11 ರಂದು ಗಂಗಾವತಿ ನಗರಕ್ಕೆ ಆಗಮಿಸಲಿದ್ದು, ಡಾ.ಅಂಬೇಡ್ಕರ್ ಮೂರ್ತಿಗೆ ಮಾಲಾರ್ಪಣೆ ಮಾಡಿದ ನಂತರ ಮಧ್ಯಾಹ್ನ 3.30 ಕ್ಕೆ ಕೊಪ್ಪಳ ನಗರದ ಅಶೋಕ ವೃತ್ತಕ್ಕೆ ಆಗಮಿಸಲಿದೆ. 100 ರಿಂದ 150 ಜನ ಪದಾಧಿಕಾರಿಗಳು ಬೈಕ್ ಜಾಥಾ ಮೂಲಕ ಹೊಸಪೇಟೆ ರಸ್ತೆಯಲ್ಲಿರುವ ಅಂಬೇಡ್ಕರ್ ಮೂರ್ತಿಗೆ ಮಾಲಾರ್ಪಣೆ, ನಗರದ ಅಶೋಕ ವೃತ್ತದಲ್ಲಿ ಬಹಿರಂಗ ಸಭೆ ನಡೆಸಲಾಗುವುದು. ಅ.12ರಂದು ಯಲಬುರ್ಗಾ ಪಟ್ಟಣಕ್ಕೆ ತೆರಳಿದೆ ಎಂದು ತಿಳಿಸಿದರು. ಪಕ್ಷದ ಪದಾಧಿಕಾರಿಗಳಾದ ಹುಲುಗಪ್ಪ ಕಟ್ಟಿಮನಿ, ಫಕ್ರುಮಾಬಿ.ಪಿ., ಸಂಜೀವಪ್ಪ ಬೇವಿನಗಿಡ, ಮೈಬೂಬ ಖಾನ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net