

ಕೊಪ್ಪಳ: ನಾಡಿನ ಏಕೀಕರಣಕ್ಕಾಗಿ ಅನೇಕ ಮಹನೀಯರು ಕೊಡುಗೆ ನೀಡಿದ್ದು, ಜಿಲ್ಲೆಯಲ್ಲೂ ಅನೇಕರು ಹೋರಾಡಿದ್ದರೆಂದು ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್‌ಹೇಳಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಜಿಲ್ಲೆಯ ಅಳವಂಡಿ ಶಿವಮೂರ್ತಿ ಸ್ವಾಮಿ, ಶಿರೂರು ವೀರಭದ್ರಪ್ಪ ತೆಗ್ಗಿನಮನಿ, ಶಂಕರಗೌಡ್ರು, ಪ್ರಭುರಾಜ ಪಾಟೀಲ್ ಸಂಗನಾಳ, ಪಂಚಾಕ್ಷರಿ ಹಿರೇಮಠ, ಸೋಮಪ್ಪ ಡಂಬಳ, ದೇವೇಂದ್ರಕುಮಾರ ಹಕಾರಿ, ಹನುಮರಡ್ಡಿ ಕಲ್ಗುಡಿ, ಪಂಚಪ್ಪ ಶೆಟ್ಟರ್, ಭೀಮನಗೌಡ ಪಾಟೀಲ್, ಹಂಜಿ ಕೊಟ್ರಪ್ಪ ಹಾಗೂ ಇತರರು ಕರ್ನಾಟಕ ಏಕೀಕರಣಕ್ಕಾಗಿ ಹೋರಾಡಿದ್ದನ್ನು ಸ್ಮರಿಸಬೇಕಾಗಿದೆ ಎಂದರು.