ಶಾಸಕ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಆಕ್ರೋಶ: ಕೊಪ್ಪಳದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ

18082022 kknr3
Published on

ಕೊಪ್ಪಳ: ಮಹಿಳೆಯರ ಬಗ್ಗೆ ಶಾಸಕ ಪ್ರಿಯಾಂಕ್ ಖರ್ಗೆ ನೀಡಿದ ಹೇಳಿಕೆ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾ ಪದಾಧಿಕಾರಿಗಳು ನಗರದ ಅಶೋಕ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ಶಾಸಕ ಪ್ರಿಯಾಂಕ್ ಖರ್ಗೆ, ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ನಾಲಿಗೆ ಹರಿಬಿಡುವ ಮೂಲಕ ಮಹಿಳೆಯರಿಗೆ ಅವಮಾನ ಮಾಡಿದ್ದಾರೆ. ಇದು ಅವರ ಸಂಸ್ಕೃತಿ ತೋರಿಸುತ್ತದೆ. ಮಹಿಳೆಯರ ಬಗ್ಗೆ ಕೀಳಾಗಿ ಮಾತನಾಡಿರುವುದು ಖಂಡನೀಯ. ಇಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಸಿದರು. ಅಶೋಕ ವೃತ್ತದಿಂದ ಜಿಲ್ಲಾಡಳಿತ ಭವನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ. ಕಡಿಗೆ ಮನವಿ ಸಲ್ಲಿಸಿದರು.
ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ವಾಣಿಶ್ರೀ ಮಠದ, ರಾಜ್ಯ ಕಾರ್ಯಕಾರಿ ಸದಸ್ಯೆ ಶೋಭಾ ನಗರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೀತಾ ಮುತ್ತಾಳ, ರತ್ನಕುಮಾರಿ, ಗೀತಾ ಪಾಟೀಲ್, ಮಂಜುಳಾ ಕರಡಿ, ಮಹಾಲಕ್ಷ್ಮೀ ಕಂದಾರಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net