ನಗರಸಭೆ ಸದಸ್ಯ ಚೋಪ್ರಾ ರಾಜೀನಾಮೆ ಪತ್ರ ವೈರಲ್ : ಅನುದಾನ ಬಳಕೆ ವಿಚಾರವಾಗಿ ಭಿನ್ನಾಭಿಪ್ರಾಯ

27072022 koppal chopra letter viral
Published on

ಕೊಪ್ಪಳ: ಶಾಸಕ ರಾಘವೇಂದ್ರ ಹಿಟ್ನಾಳ್ ನಡೆಗೆ ಬೇಸತ್ತು ರಾಜೀನಾಮೆ ನೀಡುವುದಾಗಿ ತಿಳಿಸಿದ್ದ ನಗರಸಭೆ ಸದಸ್ಯ ಮಹೇಂದ್ರ ಚೋಪ್ರಾ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ನೀಡಿದ್ದ ರಾಜೀನಾಮೆ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ನಗರಸಭೆ ಅನುದಾನ ಬಳಕೆ ವಿಚಾರವಾಗಿ ಸದಸ್ಯರ ಅಭಿಪ್ರಾಯ ಪಡೆಯದೇ ಏಕಪಕ್ಷೀಯ ನಡೆ ಅನುಸರಿಸಿದ ಸಂಬಂಧ ಶಾಸಕ ಹಿಟ್ನಾಳ್ ವಿರುದ್ಧ ಅಸಮಾಧಾನ ಸ್ಫೋಟಗೊಂಡಿತ್ತು. ಇದರ ಬೆನ್ನಲ್ಲೇ ನಾಯಕರು ಸಮಾಧಾನ ಪಡಿಸಿದ್ದಾರೆ ಎನ್ನಲಾಗಿತ್ತು. ಸದ್ಯ ಜು.13ರಂದು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಲಾಗಿದೆ. ಕೊನೆಗೂ ಮಾತಿನಂತೆ ನಡೆದುಕೊಂಡಿದ್ದು, ಪಕ್ಷದ ಮುಖಂಡರು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಈ ಬಗ್ಗೆ ವಿಜಯವಾಣಿಗೆ ಪ್ರತಿಕ್ರಿಯಿಸಿದ ಚೋಪ್ರಾ, ರಾಜೀನಾಮೆ ಸಂಬಂಧ ನನ್ನ ವಾರ್ಡ್ ಜನರೊಂದಿಗೆ ಮಾತುಕತೆ ನಡೆಸಿರುವೆ. ಅವರು ಅವಸರದ ನಿರ್ಧಾರ ಕೈಗೊಳ್ಳದಂತೆ ತಿಳಿಸಿದ್ದಾರೆ. ಹೀಗಾಗಿ ತಟಸ್ಥನಾಗಿರುವೆ. ಮುಂದಿನ ಬೆಳವಣಿಗೆ ಗಮನಿಸಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net