ಅನಧಿಕೃತ ದತ್ತು ಅಪರಾಧ: ಕೊಪ್ಪಳ ಸಿವಿಲ್ ನ್ಯಾಯಾಧೀಶ ದೇವೇಂದ್ರ ಪಂಡಿತ್ ಹೇಳಿಕೆ

11112022 koppal Judge Devendra Pandit
Published on

ಕೊಪ್ಪಳ: ಬಾಲನ್ಯಾಯ ಕಾಯ್ದೆ ಅನ್ವಯ ಮಕ್ಕಳನ್ನು ಅನಧಿಕೃತವಾಗಿ ದತ್ತು ಪಡೆಯುವುದು ಅಥವಾ ನೀಡುವುದು ಅಪರಾಧ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ದೇವೇಂದ್ರ ಪಂಡಿತ್ ಹೇಳಿದರು.

ಅಂತಾರಾಷ್ಟ್ರೀಯ ದತ್ತು ಮಾಸಾಚರಣೆ ಅಂಗವಾಗಿ ನಗರದ ಚಂದ್ರಮುಖಿ ಸ್ಕೂಲ್ ಆಫ್ ನರ್ಸಿಂಗ್‌ನಲ್ಲಿ ಜಿಲ್ಲಾಡಳಿತ ಬುಧವಾರ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಬಾಲನ್ಯಾಯ ಕಾಯ್ದೆ ಉಲ್ಲಂಘಿಸಿದಲ್ಲಿ ಒಂದು ಲಕ್ಷ ರೂ. ದಂಡ, 5 ವರ್ಷ ಜೈಲು ಶಿಕ್ಷೆ ವಿಧಿಸಬಹುದು. ಇಂತಹ ಪ್ರಕರಣಗಳಲ್ಲಿ ಆಸ್ಪತ್ರೆ, ಖಾಸಗಿ ನರ್ಸಿಂಗ್ ಹೋಂ ಸಿಬ್ಬಂದಿ ಶಾಮೀಲಾದಲ್ಲಿ ಒಂದು ಲಕ್ಷ ರೂ. ದಂಡ ಹಾಗೂ 7ವರ್ಷ ಜೈಲು ಶಿಕ್ಷೆ ವಿಧಿಸಬಹುದು. ಹೀಗಾಗಿ ಈ ಬಗ್ಗೆ ವಿದ್ಯಾರ್ಥಿಗಳಿರುವಾಗಲೇ ಅರಿತುಕೊಳ್ಳಬೇಕು. ನಿಮ್ಮ ಕ್ಷೇತ್ರ ವ್ಯಾಪ್ತಿಯ ಕಾನೂನುಗಳನ್ನು ಅರಿತಲ್ಲಿ ಭವಿಷ್ಯಕ್ಕೆ ಅನುಕೂಲವಾಗಲಿದೆ. ನೀವು ತಿಳಿದು ಇತರರಿಗೂ ತಿಳಿಸಿ ಎಂದು ಸಲಹೆ ನೀಡಿದರು. ಕಾಲೇಜಿನ ಆಡಳಿತಾಧಿಕಾರಿ ಬಸಯ್ಯ ಹಿರೇಮಠ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರೋಹಿಣಿ ಕೊಟಗಾರ, ಪ್ರಶಾಂತರಡ್ಡಿ, ಪ್ರತಿಭಾ ಎಂ.ಕಾಶಿಮಠ, ಪ್ರಾಚಾರ್ಯ ಆನಂದ ಹಳ್ಳಿಗುಡಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net