ವಿಶ್ವಕರ್ಮ ಜಯಂತಿ ಅಚ್ಚುಕಟ್ಟಾಗಿ ಆಚರಿಸಿ: ಸಹಾಯಕ ಆಯುಕ್ತ ಬಸವಣ್ಣೆಪ್ಪ ಕಲಶೆಟ್ಟಿ ಸೂಚನೆ

11092022 koppal AC BASAVANNAPPA KALASHETTI
Published on

ಕೊಪ್ಪಳ: ವಿಶ್ವಕರ್ಮ ಜಯಂತಿಯನ್ನು ಸೆ.18ರಂದು ಅಚ್ಚುಕಟ್ಟಾಗಿ ಆಚರಿಸಬೇಕು ಎಂದು ಸಹಾಯಕ ಆಯುಕ್ತ ಬಸವಣ್ಣೆಪ್ಪ ಕಲಶೆಟ್ಟಿ ಹೇಳಿದರು.

ನಗರದ ಎಸಿ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪೂರ್ವಭಾವ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. ಜಯಂತಿ ಅಂಗವಾಗಿ ಸೆ.18ರಂದು ನಗರದ ಶಿರಸಪ್ಪಯ್ಯನ ಮಠದಿಂದ ಸಾಹಿತ್ಯ ಭವನದವರೆಗೆ ವಿಶ್ವಕರ್ಮ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳು ಭಾಗವಹಿಸುವಂತೆ ನೋಡಿಕೊಳ್ಳಬೇಕು. ಸಾಹಿತ್ಯ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಶಿಷ್ಟಾಚಾರದಂತೆ ಎಲ್ಲ ವ್ಯವಸ್ಥಿತ ಕ್ರಮಗಳನ್ನು ಕೈಗೊಂಡು, ಅಚ್ಚುಕಟ್ಟಾಗಿ ಜಯಂತಿ ಆಚರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಎಡಿ ಕೊಟ್ರೇಶ ಮರಬನಳ್ಳಿ, ಪೊಲೀಸ್ ಸಿಬ್ಬಂದಿ ಬಸಪ್ಪ ಹಾದಿಮನಿ, ಸಮುದಾಯದ ಜಿಲ್ಲಾಧ್ಯಕ್ಷ ಈಶಪ್ಪ ಬಡಿಗೇರ, ಶೇಖರಪ್ಪ ಬಡಿಗೇರ, ರುದ್ರಪ್ಪ ಬಡಿಗೇರ, ದೇವಪ್ಪ ಎಚ್. ಬಡಿಗೇರ, ಅಶೋಕ ಕುಮಾರ, ಕಲ್ಲಪ್ಪ ಬಡಿಗೇರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net