

ಉಡುಪಿ: ಕೊರಗ ಸಮುದಾಯದ ಶಿಕ್ಷಣ ಪಡೆದ ಯುವಜನರಿಗೆ ಸರ್ಕಾರಿ ಉದ್ಯೋಗದಲ್ಲಿ ನೇರ ನೇಮಕಾತಿ ಮೂಲಕ ಉದ್ಯೋಗ ನೀಡಬೇಕು ಮತ್ತು ಕೃಷಿಭೂಮಿ ಹಕ್ಕುಪತ್ರ ಮಂಜೂರಾತಿ ಮಾಡಬೇಕು ಎಂದು ಕೊರಗ ಅಭಿವೃದ್ಧಿ ಸಂಗಳ ಒಕ್ಕೂಟದ ಅಧ್ಯೆ ಸುಶೀಲಾ ನಾಡ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ಕೊರಗ ಸಮುದಾಯವು ಅತ್ಯಂತ ಹಿಂದುಳಿದ ಅಸಹಾಯಕ ದುರ್ಬಲ ಬುಡಕಟ್ಟು ಪಂಗಡವಾಗಿದ್ದು, ಮಣಿವನ್ನನ್ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿದ್ದ ಸಂದರ್ಭದಲ್ಲಿ ವಿದ್ಯಾವಂತ ಯುವಜನರ ಸರ್ವೇ ಕಾರ್ಯ ನಡೆಸಲಾಗಿತ್ತು. ಆದರೆ ಹಠಾತ್ತನೆ ಬುಡಕಟ್ಟು ಕಲ್ಯಾಣ ಇಲಾಖೆಯ ಜವಬ್ದಾರಿಯಿಂದ ಅವರನ್ನು ವಿಯುಕ್ತಿಗೊಳಿಸಲಾಯಿತು. ನಂತರ ಸಂಬಂಧಿಸಿದ ಇಲಾಖೆ ಯಾವುದೇ ರೀತಿಯ ಕ್ರಮ ಕೈಗೊಂಡಿರುವುದಿಲ್ಲ. ಇದರಿಂದ ಯುವಜನರು ಉದ್ಯೋಗವಿಲ್ಲದೇ ಮಾನಸಿಕ ಒತ್ತಡದಿಂದ ಆತ್ಮವಿಶ್ವಾಸವನ್ನು ಕಳೆದುಕೊಂಡು ಬದುಕುವಂತಾಗಿದೆ. ಇದಲ್ಲದೇ ಪದವಿ ಪಡೆದ ಯುವಜನರನ್ನು ಕೂಡ ಕೇವಲ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆಗಳಲ್ಲಿ ಸ್ವಚ್ಛತೆ ಕೆಲಸಗಳಿಗೆ ಮಾತ್ರವೇ ಬಳಸಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಸರ್ಕಾರದ ಬೇರೆ ಬೇರೆ ಇಲಾಖೆಗಳ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿದರೂ ತರ ಬಲಾಡ್ಯ ಬುಡಕಟ್ಟು ಸಮುದಾಯಗಳ ಕಾರಣಗಳಿಂದಾಗಿ ನಮ್ಮ ಯುವಜನರಿಗೆ ಉದ್ಯೋಗ ಸಿಗುತ್ತಿಲ್ಲ. ಆದ್ದರಿಂದ ಸರ್ಕಾರ ಬಜೆಟ್ನಲ್ಲಿ ಕೊರಗರು ಒಳಗೊಂಡಂತೆ ರಾಜ್ಯ ಸಿವಿಲ್ ಸೇವೆಗಳಲ್ಲಿ ಪ್ರಾತಿನಿಧ್ಯ ನೀಡುವ ಸಲುವಾಗಿ ನೇರ ನೇಮಕಾತಿಯನ್ನು ಘೋಷಿಸಿರುವುದು ಸಂತಸ ತಂದಿದೆ. ಆದರೆ ಪ.ಜಾತಿ ಮತ್ತು ಪ.ವರ್ಗದಲ್ಲಿ ಅತ್ಯಂತ ಹಿಂದುಳಿದಿರುವ ಕೊರಗ ಸಮುದಾಯಕ್ಕೆ ವಿಶೇಷವಾಗಿ ನೇರ ನೇಮಕಾತಿ ಅನುಷ್ಠಾನಗೊಳಿಸಬೇಕು. ಈ ಸಂದರ್ಭದಲ್ಲಿ ಮೊದಲ ಹಂತದಲ್ಲಿ ಅತೀ ಹೆಚ್ಚು ಅರ್ಹತೆ ಹೊಂದಿದ ಡಾಕ್ಟರೇಟ್, ವೈದ್ಯಕಿಯ, ಸ್ನಾತ್ತಕ್ಕೋತರ ಪದವಿ, ಪದವಿ, ತಾಂತ್ರಿಕ ನರ್ಸಿಂಗ್, ಡಿಪ್ಲೋಮಾ, ಡಿ.ಎಡ್. ಬಿ.ಎಡ್, ಕಾನೂನು ಪದವಿ, ಇಂಜಿನಿಯರಿಂಗ್ ಪದವಿ ಪಡೆದವರಿಗೆ ಮೊದಲ ಆದ್ಯತೆ ನೀಡಬೇಕು. ತದನಂತರ ಎಸ್.ಎಸ್.ಎಲ್.ಸಿ. ಪಿ.ಯು.ಸಿ. ಅರ್ಹತೆಗೆ ಅನುಗುಣವಾಗಿ ಉದ್ಯೋಗ ಒದಗಿಸಬೇಕು ಎಂದರು.
ಆದಿವಾಸಿ ಕೊರಗ ಸಮುದಾಯದ ಜನರು ತಯಾರಿಸಿದ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ ಒದಗಿಸಬೇಕು. ಕುಲಕಸುಬಿನ ಉತ್ಪನ್ನಗಳು ಬ್ರಾಂಡ್ ಉತ್ಪನ್ನವಾಗಿಸಬೇಕು. ಈಗಾಗಲೇ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ನೀಡಿದ 800 ಭೂ ರಹಿತ ಅರ್ಜಿದಾರರಿಗೆ ಕನಿಷ್ಠ 1 ಎಕ್ರೆ ಕೃಷಿ ಭೂಮಿಯ ಹಕ್ಕುಪತ್ರ ಒದಗಿಸುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಆದಿವಾಸಿ ಬುಡಕಟ್ಟು ಕೊರಗ ಜನಾಂಗ ಜನಗಣತಿಯಿಂದ ಜನಗಣತಿಗೆ ಜನ ಸಂಖ್ಯೆ ಇಳಿಮುಖವಾಗುತ್ತಿರುವುದು ಹದಗೆಟ್ಟ ಆರೋಗ್ಯ, ರಕ್ತ ಹೀನತೆ ಮತ್ತು ಆಹಾರದ ಪರಿಸ್ಥಿತಿಗಳು ಸಾಮಾಜಿಕ ಸಮಸ್ಯೆಗಳು ಕೂಡ ಇದಕ್ಕೆ ಕಾರಣವಾಗಿದೆ. ಕೇವಲ 20 ವರ್ಷಗಳಲ್ಲಿ ನಮ್ಮ ಜನ ಸಂಖ್ಯೆ ಶೇ. 30 ರಷ್ಟು ಕಡಿಮೆಯಾಗಿದೆ. ಈ ಬಗ್ಗೆ ಸಮಗ್ರ ಆರೋಗ್ಯ ಅಧ್ಯಯನ ಮತ್ತು ಸಂಶೋಧನೆ ನಡೆಸಬೇಕು. ಇದಕ್ಕಾಗಿ ವಾರ್ಷಿಕ ರೂ. 2 ಕೋಟಿ ಅನುದಾನ ಒದಗಿಸಬೇಕು ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಸಂಟನೆ ಮುಖಂಡರಾದ ಕೆ. ಪುತ್ರನ್, ದಿವಾಕರ್, ಚಂದ್ರ ಕೊಕ್ಕರ್ಣೆ, ಬೊಗ್ರ ಕೊರಗ ಉಪಸ್ಥಿತರಿದ್ದರು.