ಕುಡಿಯರ ಮುತ್ತಪ್ಪಗೆ ಕೊರವಂಜಿ ಪ್ರಶಸ್ತಿ ಪ್ರದಾನ

28.npk-3.
ಕೊಡಗು ಜಿಲ್ಲೆಯ ಯವಕಪಾಡಿ ನಿವಾಸಿ ಆದಿವಾಸಿ ಹೋರಾಟಗಾರ ಕುಡಿಯರ ಮುತ್ತಪ್ಪ ಅವರಿಗೆ ಮಂಡ್ಯದ ಡಾ. ಬಿ .ಆರ್ . ಅಂಬೇಡ್ಕರ್ ಭವನದಲ್ಲಿ ಇತ್ತೀಚೆಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
Published on

ನಾಪೋಕ್ಲು: ಜಿಲ್ಲೆಯ ಯವಕಪಾಡಿ ನಿವಾಸಿ ಆದಿವಾಸಿ ಹೋರಾಟಗಾರ ಕುಡಿಯರ ಮುತ್ತಪ್ಪ ಅವರು ರಾಜ್ಯ ಮಟ್ಟದ ಕೊರವಂಜಿ ಪ್ರಶಸ್ತಿ ಸ್ವೀಕರಿಸಿದ್ದಾರೆ.

ಮಂಡ್ಯದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಗುರುವಾರ ಆಯೋಜಿಸಿದ್ದ ಸಂಸ್ಕೃತಿ ಉತ್ಸವದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಕಾರ್ಯಕ್ರಮವನ್ನು ಮಂಡ್ಯ ಜಿಲ್ಲಾ ಕುಳುವ ಸಮಾಜ ಹಾಗೂ ಡ್ರೀಮ್ ಫೌಂಡೇಷನ್ ಟ್ರಸ್ಟ್ ಸಹಯೋಗದಲ್ಲಿ ಸಂಸ್ಕೃತಿ ಉತ್ಸವ ಆಯೋಜಿಸಲಾಗಿತ್ತು.
ಮಂಡ್ಯ ಕುಳುವ ಸಮಾಜದ ಅಧ್ಯಕ್ಷ ಕೃಷ್ಣಕುಮಾರ್ ಗಂಗೂರು ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಸಭಾ ಉಪಾಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಂಬಾಣಿ, ಶ್ರೀರಂಗಪಟ್ಟಣದ ಚಂದ್ರವನ ಆಶ್ರಮದ ಶ್ರೀ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ, ಚಿಂತಕ ಜಿ.ಸಿದ್ದರಾಮಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕುಡಿಯರ ಮುತ್ತಪ್ಪ ಕುಡಿಯ ಜನಾಂಗಕ್ಕೆ ಸರ್ಕಾರದಿಂದ ಇರುವ ಸೌಲಭ್ಯಗಳನ್ನು ತಲುಪಿಸುವ ವ್ಯವಸ್ಥೆಯನ್ನು ಕೈಗೊಂಡಿದ್ದರು. ಕೊಡಗು ಬುಡಕಟ್ಟು ಕೃಷಿಕರ ಸಂಘದ ಅಧ್ಯಕ್ಷರಾಗಿ ಇವರು ಕಾರ್ಯನಿರ್ವಹಿಸಿದ್ದು, ಈಗಾಗಲೇ ವಿವಿಧ ಸಂಘ ಸಂಸ್ಥೆಗಳಿಂದ ಹಲವಾರು ಪ್ರಶಸ್ತಿಗಳು ಲಭಿಸಿವೆ. ಪ್ರಸ್ತುತ ಮಡಿಕೇರಿ ತಾಲೂಕಿನ ಕಕ್ಕಬೆ ಕುಂಜಿಲ ಗ್ರಾಮ ಪಂಚಾಯತಿ ವ್ಯಾಪ್ತಿಯ ಯವಕಪಾಡಿ ಗ್ರಾಮದಲ್ಲಿ ಕುಟುಂಬದೊಂದಿಗೆ ಇವರು ನೆಲೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net