ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿ ಕೋಟ ಶ್ರೀನಿವಾಸ ಪೂಜಾರಿ ನೇಮಕ

kota srinivas poojary
Published on

ಬೆಂಗಳೂರು: ವಿಧಾನ ಪರಿಷತ್ ವಿಪಕ್ಷ ನಾಯಕರನ್ನಾಗಿ ಬಿಜೆಪಿ ಕೋಟಾ ಶ್ರೀನಿವಾಸ ಪೂಜಾರಿ ನೇಮಿಸಿದೆ. ಈ ಕುರಿತಾಗಿ ಭಾರತೀಯ ಜನತಾ ಪಾರ್ಟಿ ರಾಜ್ಯಾಧ್ಯಕ್ಷರಾಗಿರು ಬಿ.ವೈ ವಿಜಯೇಂದ್ರ ಅವರು ಅಧಿಕೃತವಾಗಿ ಆದೇಶ ಹೊರಡಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆದೇಶ ಹೊರಡಿಸಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದಂತ ಜೆಪಿ ನಡ್ಡಾ ಅವರ ಸೂಚನೆಯ ಮೇರೆಗೆ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ವಿವಿಧ ಜವಾಬ್ದಾರಿಗಳಿಗೆ ನಿಯುಕ್ತಿಗೊಳಿಸಲಾಗಿದೆ ಎಂದಿದ್ದಾರೆ.

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿ ಕೋಟಾ ಶ್ರೀನಿವಾಸ ಪೂಜಾರಿ, ವಿರೋಧ ಪಕ್ಷದ ಉಪನಾಯಕರಾಗಿ ಸುನೀಲ್ ವಲ್ಯಾಪುರೆ ಹಾಗೂ ಮುಖ್ಯ ಸಚೇತಕರಾಗಿ ಎನ್.ರವಿಕುಮಾರ್ ನೇಮಕ ಮಾಡಲಾಗಿದೆ.

ವಿಧಾನಸಭೆಯ ವಿರೋಧ ಪಕ್ಷದ ಉಪ ನಾಯಕರಾಗಿ ಅರವಿಂದ್ ಬೆಲ್ಲದ್, ಮುಖ್ಯ ಸಚೇತಕರಾಗಿ ದೊಡ್ಡನಗೌಡ ಜಿ ಪಾಟೀಲ್ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net