ಲಸಿಕಾ ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ; ಕೋಟಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಕೂರ್ಮಾ ರಾವ್ ಶ್ಲಾಘನೆ

kota bheti
Published on

ಕೋಟ: ದೇಶಾದ್ಯಂತ ಕೋವಿಡ್ ಲಸಿಕಾ ಮೇಳಗಳನ್ನು ಆಯೋಜಿಸಲಾಗುತ್ತಿದೆ. ಜನಸಾಮಾನ್ಯರು ಒಳ್ಳೆಯ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಸರ್ಕಾರದ ನಿರ್ದೇಶದಂತೆ ಜಿಲ್ಲಾದ್ಯಂತ ಸಂಚರಿಸಿದ್ದೇನೆ. ಅಲ್ಲಲ್ಲಿ ಉಂಟಾಗುತ್ತಿರುವ ಸಣ್ಣಪುಟ್ಟ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದಿದ್ದೇನೆ. ಉಡುಪಿ ಜಿಲ್ಲಾಧಿಕಾರಿಯಾಗಿ ಮೊಟ್ಟಮೊದಲ ಬಾರಿ ಮೂಡುಗಿಳಿಯಾರಿಗೆ ಭೇಟಿ ನೀಡಿದ್ದೇನೆ. ಜನಸಾಮಾನ್ಯರ ಸಮಸ್ಯೆಗೆ ಸ್ಪಂದಿಸಿ ಉಡುಪಿ ಜಿಲ್ಲೆಯನ್ನು ಅಭಿವೃದ್ಧಿಯತ್ತ ಕೊಂಡ್ಯೊಯಲು ಪ್ರಯತ್ನಿಸುತ್ತೇನೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ತಿಳಿಸಿದರು.

ಕೋಟ ಭಾಗಕ್ಕೆ ಶುಕ್ರವಾರ ದಿಢೀರ್ ಭೇಟಿ ನೀಡಿ ಕೋಟ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಮೂಡುಗಿಳಿಯಾರು ಫ್ರೌಢಶಾಲಾ ಆವರಣದಲ್ಲಿ ನಡೆಯುತ್ತಿದ್ದ ಲಸಿಕಾ ಮೇಳಕ್ಕೆ ಭೇಟಿ ನೀಡಿ ಅಲ್ಲಿನ ಸ್ಥಳೀಯ ಸಮಸ್ಯೆಗಳ ಬಗ್ಗೆ ವೈದ್ಯಾಧಿಕಾರಿ ಡಾ. ವಿಶ್ವನಾಥ್ ಮೂಲಕ ಮಾಹಿತಿ ಪಡೆದು ಮಾಧ್ಯಮದ ಜತೆ ಮಾತನಾಡಿದರು.

ಕೋಟ ಕಂದಾಯ ನಿರೀಕ್ಷಕ ರಾಜು, ತಾಪಂ ಮಾಜಿ ಸದಸ್ಯ ಭರತ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net