ಕುಂದಾಪುರ: ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗ ಕೋಟೇಶ್ವರ, ಹಳೇ ವಿದ್ಯಾರ್ಥಿ ಸಂಘದ ಸಾರಥ್ಯದಲ್ಲಿ ಶತ ಸಂಭ್ರಮ-2025 ಕಾರ್ಯಕ್ರಮ ಜ.9ರಿಂದ 11ರ ತನಕ ನಡೆಯಲಿದೆ ಎಂದು ಶತಮಾನೋತ್ಸವ ಸಮಿತಿ ಅಧ್ಯಕ್ಷ ಶ್ರೀಧರ ವಿಠಲ ಕಾಮತ್ ಹೇಳಿದರು.
ಜ.9ರಂದು ಬೆಳಗ್ಗೆ ಶತಮಾನೋತ್ಸವ-2025 ಶತಪರ್ವ ಆರಂಭವಾಗಲಿದೆ. ಕೋಟೇಶ್ವರ ಗ್ರಾಪಂ ಅಧ್ಯಕ್ಷೆ ರಾಗಿಣಿ ದೇವಾಡಿಗ ಧ್ವಜಾರೋಹಣ ನೆರವೇರಿಸಲಿದ್ದಾರೆ. ಇನ್ನೋವೇಶನ್ ಎಕ್ಸೋ ಉದ್ಘಾಟನೆ ನಡೆಯಲಿದೆ. ಸಂಜೆ ಸಭಾ ಕಾರ್ಯಕ್ರಮ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಭೋಜನ ಶಾಲೆಯನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಉದ್ಘಾಟಿಸುವರು, ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
10ರಂದು ಶಾಲಾ ಪ್ರಾಥಮಿಕ ವಿಭಾಗದ ಪ್ರತಿಭೆಗಳಿಂದ ನೃತ್ಯ ಸಿಂಚನ, ಸಭಾ ಕಾರ್ಯಕ್ರಮ ನಡೆಯಲಿದೆ. ಬಳಿಕ ಮಕ್ಕಳಿಂದ ಸಾಂಸ್ಕೃತಿಕ ವೈಭವ, ಯಕ್ಷಗಾನ ಮತ್ತು ಹಳೇ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, 11ರಂದು ಶಾಲಾ ಪ್ರಾಥಮಿಕ ವಿಭಾಗದ ಪ್ರತಿಭೆಗಳಿಂದ ನೃತ್ಯ ಸಿಂಚನ ಜರುಗಲಿದೆ. ಸಂಜೆ ಸಭಾ ಕಾರ್ಯಕ್ರಮದಲ್ಲಿ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಉಡುಪ ಅಧ್ಯಕ್ಷತೆ ವಹಿಸುವರು. ಬಳಿಕ ಯಕ್ಷಗಾನ ವೈಭವ ಮಧುರ ಮಹೇಂದ್ರ, ಪೌರಾಣಿಕ ನಾಟಕ ವಿಷಮ ರಣರಂಗ, ನಂತರ ಹಳೇ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದರು. ಮುಖ್ಯ ಶಿಕ್ಷಕ ಚಂದ್ರ ನಾಯ್ಕ ಎಚ್., ಎಸ್‌ಡಿಎಂಸಿ ಅಶೋಕ್ ಗೋಪಾಡಿ ಸುದ್ದಿಗೋಷ್ಠಿಯಲ್ಲಿದ್ದರು.