

ಕೋಟ: ಕೋಟತಟ್ಟು ಗ್ರಾಮ ಪಂಚಾಯಿತಿಯಲ್ಲಿ ಬುಧವಾರ ಗ್ರಾಮ ಆರೋಗ್ಯ ಕಾರ್ಯಕ್ರಮ ಉಪಾಧ್ಯಕ್ಷೆ ಸರಸ್ವತಿ ಅಧ್ಯಕ್ಷತೆಯಲ್ಲಿ ನಡೆಯಿತು.
ಸಮುದಾಯ ಆರೋಗ್ಯ ಕೇಂದ್ರ ಬ್ರಹ್ಮಾವರದ ಸಮುದಾಯ ಆರೋಗ್ಯ ಅಧಿಕಾರಿ ರೋಹನ್ ಮಾಹಿತಿ ನೀಡಿದರು. ಕೋಟತಟ್ಟು ಗ್ರಾಪಂ ಸದಸ್ಯರಾದ ವಾಸು ಪೂಜಾರಿ, ಪ್ರಕಾಶ್ ಹಂದಟ್ಟು, ವಿದ್ಯಾ, ಅಶ್ವಿನಿ, ಜ್ಯೋತಿ, ಅಂಗನವಾಡಿ ಮೇಲ್ವಿಚಾರಕಿ ಲಕ್ಷ್ಮೀ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು. ಪಿಡಿಒ ರವೀಂದ್ರ ರಾವ್ ಸ್ವಾಗತಿಸಿದರು. ಕಾರ್ಯದರ್ಶಿ ಸುಮತಿ ಅಂಚನ್ ವಂದಿಸಿದರು.