ಕಂಬಳಕ್ಕೆ ರಾಜ್ಯಸರ್ಕಾರದ ಅನುದಾನ :ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಆಗ್ರಹ

New Project (51)
Published on

ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ

ಜಾನಪದ ಕ್ರೀಡೆ ತುಳುನಾಡಿನ ಕಂಬಳ ಧಾರ್ಮಿಕ ಮತ್ತು ಸಾಂಸ್ಕೃತಿಕ ಕೊಂಡಿಯಾಗಿದೆ. ಇಂತಹ ಕ್ರೀಡೆಯನ್ನು ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯ. ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭಕಂಬಳಕ್ಕೆ ರೂ.5 ಲಕ್ಷ ಪ್ರೋತ್ಸಾಹ ಧನವನ್ನು ಬಿಡುಗಡೆ ಮಾಡುತ್ತಿದ್ದರು. ಪ್ರಸಕ್ತ ರಾಜ್ಯ ಸರ್ಕಾರ ಈ ಅನುದಾನ ನಿಲ್ಲಿಸಿದ್ದು ತಕ್ಷಣ ಅದನ್ನು ಬಿಡುಗಡೆಗೊಳಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದರು.

ಮೂಡುಬಿದಿರೆಯ ಒಂಟಿಕಟ್ಟೆ ಕಡಲಕೆರೆಯಲ್ಲಿ ನಡೆದ 22ನೇ ವರ್ಷದ ಕೋಟಿ-ಚೆನ್ನಯ ಜೋಡುಕರೆ ಕಂಬಳದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಶಾಸಕ ಕೋಟ್ಯಾನ್ ನೇತೃತ್ವದಲ್ಲಿ ಯಶಸ್ವಿಯಾಗಿ ಜಾತ್ರೆಯ ರೀತಿಯಲ್ಲಿ ಈ ಕಂಬಳ ನಡೆಯುತ್ತಿದ್ದು, ಯುವಜನತೆ ಇದನ್ನು ಉಳಿಸುವಂತಹ ಕೆಲಸ ವಾಡಬೇಕಾಗಿದೆ ಎಂದರು.

ಸಂಸದ ಕ್ಯಾ.ಬೃಜೇಶ್ ಚೌಟ, ಮಂಗಳೂರು ಶಾಸಕ ವೇದವ್ಯಾಸ ಕಾಮತ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಕಲ್ಲಡ್ಕ ಪ್ರಭಾಕರ ಭಟ್, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುವಾರ್, ಉದ್ಯಮಿ ಶಶಿಧರ್ ಶೆಟ್ಟಿ ಬರೋಡ, ಪುರಸಭಾ ಉಪಾಧ್ಯಕ್ಷ ನಾಗರಾಜ ಪೂಜಾರಿ, ಮುಲ್ಕಿ-ಮೂಡುಬಿದಿರೆ ಬಿಜೆಪಿ ಮಂಡಲಾಧ್ಯಕ್ಷ ದಿನೇಶ್ ಪುತ್ರನ್, ಕಾರ್ಯದರ್ಶಿ ಹರಿಪ್ರಸಾದ್ ಶೆಟ್ಟಿ, ಕಂಬಳ ಸಮಿತಿಯ ಪ್ರಮುಖರಾದ ಗುಣಪಾಲ ಕಡಂಬ, ಭಾಸ್ಕರ ಕೋಟ್ಯಾನ್, ರಂಜಿತ್ ಪೂಜಾರಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net