ಬಂಟ್ವಾಳ: ಜನವರಿ 19ರಂದು ನಡೆಯಲಿರುವ ಕೋಟಿ-ಚೆನ್ನಯ ಕ್ರೀಡೋತ್ಸವದ ಸಮಾಲೋಚನಾ ಸಭೆ ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಜರುಗಿತು.
ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಬಿ.ಸಂಜೀವ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ತಾಲೂಕಿನ 24 ಬಿಲ್ಲವ ಗ್ರಾಮ ಸಮಿತಿಗಳ ಅಧ್ಯಕ್ಷರು ಹಾಗೂ ಪ್ರತಿನಿಧಿಗಳು ಭಾಗವಹಿಸಿದ್ದರು. ಕ್ರೀಡೋತ್ಸವ ಸಮಿತಿ ಸಂಚಾಲಕ ಬೇಬಿ ಕುಂದರ್, ಹಾಗೂ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಪೂಜಾರಿ ಮೆಲ್ಕಾರ್ ಕ್ರೀಡಾಕೂಟದ ರೂಪುರೇಷೆ, ಸೂಚನೆ ಮತ್ತು ನಿಯಮ ಸಭೆಯ ಮುಂದಿಟ್ಟರು.
ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್ ಎಂ.ತುಂಬೆ, ಆಂತರಿಕ ಲೆಕ್ಕ ಪರಿಶೋಧಕ ಹೇಮಂತ್ ಕುಮಾರ್ ಮೂರ್ಜೆ, ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಚಂದ್ರಶೇಖರ ಪೂಜಾರಿ, ರಾಮಪ್ಪ ಪೂಜಾರಿ, ಸಜೀಪಮೂಡ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಗೌರವ ಅಧ್ಯಕ್ಷ ಸಂಜೀವ ಪೂಜಾರಿ ಕುಚ್ಚಿಗುಡ್ಡೆ, ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ, ಬಿಲ್ಲವ ಮಹಿಳಾ ಸಮಿತಿ ಅಧ್ಯಕ್ಷೆ ಶೈಲಜಾ ರಾಜೇಶ್, ಕ್ರೀಡೋತ್ಸವ ಸಮಿತಿ ಕೋಶಾಧಿಕಾರಿ ಗಣೇಶ್ ಪೂಂಜರೆಕೋಡಿ, ಜತೆ ಕಾರ್ಯದರ್ಶಿ ಹರೀಶ್ ಕೋಟ್ಯಾನ್ ಕುದನೆ, ಕ್ರೀಡೋತ್ಸವದ ಉಪಸಮಿತಿ ಸಂಚಾಲಕರು, ಸದಸ್ಯರು, ಗ್ರಾಮ ಸಮಿತಿಗಳ ಅಧ್ಯಕ್ಷರು ಸದಸ್ಯರು ಉಪಸ್ಥಿತರಿದ್ದರು.