ಕೋಟ್ಪಾ ದಾಳಿ, ಅರಿವು ಕಾರ್ಯಕ್ರಮ ಹೆಚ್ಚಿಸಿ

ಚಿಕ್ಕಬಳ್ಳಾಪುರದಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್, ಜಿಲ್ಲಾ ಉಪ ಪೊಲೀಸ್ ವರಿಷ್ಠಾಧಿಕಾರಿ ಶಿವಕುವಾರ್, ಜಿಪಂ ಉಪಕಾರ್ಯದರ್ಶಿ ಅಥಿಕ್ ಡಿಎಚ್‌ಒ ಡಾ. ಮಹೇಶ್ ಕುಮಾರ್ ಇತರರಿದ್ದರು.
2
ಚಿಕ್ಕಬಳ್ಳಾಪುರದಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್, ಜಿಲ್ಲಾ ಉಪ ಪೊಲೀಸ್ ವರಿಷ್ಠಾಧಿಕಾರಿ ಶಿವಕುವಾರ್, ಜಿಪಂ ಉಪಕಾರ್ಯದರ್ಶಿ ಅಥಿಕ್ ಡಿಎಚ್‌ಒ ಡಾ. ಮಹೇಶ್ ಕುಮಾರ್ ಇತರರಿದ್ದರು.
Published on

ಅಧಿಕಾರಿಗಳಿಗೆ ಎಡಿಸಿ ಡಾ. ಎನ್. ಭಾಸ್ಕರ್ ಸೂಚನೆ ನಿಯಮ ಉಲ್ಲಂಘನೆಗೆ ಅವಕಾಶ ನೀಡಬೇಡಿ



ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೊಟ್ಪಾ ದಾಳಿ ಮತ್ತು ಅರಿವು ಕಾರ್ಯಕ್ರಮಗಳನ್ನು ಹೆಚ್ಚು ಆಯೋಜಿಸುವಂತೆ ಅಪರ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್ ಸೂಚಿಸಿದರು.
ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ತಂಬಾಕು ನಿಯಂತ್ರಣ ಕಾರ್ಯಕ್ರಮದ ತ್ರೈವಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ವಾತನಾಡಿದರು.
ಸಾರ್ವಜನಿಕ ಸ್ಥಳಗಳಲ್ಲಿ ವಾರಕ್ಕೆ ಒಂದೆರಡು ಬಾರಿ ಕಡ್ಡಾಯವಾಗಿ ಕಾರ್ಯಾಚರಣೆ ಕೈಗೊಂಡು ಪರಿಣಾಮಕಾರಿಯಾಗಿ ತಂಬಾಕು ಉತ್ಪನ್ನಗಳ ಬಳಕೆ ಹಾಗೂ ಸೇವನೆಯನ್ನು ನಿಯಂತ್ರಿಸಬೇಕು. ಬಸ್ ನಿಲ್ದಾಣಗಳಲ್ಲಿ ತಿಂಗಳಿಗೆ ಕನಿಷ್ಠ 10 ಕೊಟ್ಪಾ ದಾಳಿ ನಡೆಸಬೇಕು. ಶಾಲಾ ಕಾಲೇಜುಗಳ ಕಟ್ಟಡದಿಂದ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ವಾರಾಟ ಮತ್ತು ಸೇವನೆಯನ್ನು ಸಂಪೂರ್ಣ ನಿಷೇಧಿಸಿದ್ದು, ನಿಯಮ ಉಲ್ಲಂಘನೆಗೆ ಅವಕಾಶ ನೀಡಬಾರದು. ತಪ್ಪು ಕಂಡುಬಂದಲ್ಲಿ ಅಂಗಡಿಗಳ ಪರವಾನಗಿಯನ್ನು ಕೂಡಲೇ ರದ್ದುಗೊಳಿಸಬೇಕು ಎಂದರು.
ಪೌರಕಾರ್ಮಿಕರಿಗೆ ಪ್ರತಿ ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ನಡೆಸುವಾಗ ಕ್ಯಾನ್ಸರ್ ರೋಗ ಪರೀಕ್ಷೆ ಕೈಗೊಳ್ಳಲು ನಿರ್ಧರಿಸಲಾಯಿತು. ಸಭೆಯಲ್ಲಿ ಜಿಲ್ಲಾ ಉಪ ಪೊಲೀಸ್ ವರಿಷ್ಠಾಧಿಕಾರಿ ಶಿವಕುವಾರ್, ಜಿಪಂ ಉಪಕಾರ್ಯದರ್ಶಿ ಅಥಿಕ್, ಜಿಲ್ಲಾ ನಗರಾಭಿವದ್ಧಿ ಕೋಶದ ಯೋಜನಾ ನಿರ್ದೇಶಕಿ ಕೆ.ವಾಧವಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕಷ್ಣಪ್ರಸಾದ್, ಅಬಕಾರಿ ಅಧೀಕ್ಷಕ ಜೆ. ದೀಪಕ್, ಜಿಲ್ಲಾ ಪ್ರವಾಸೋದ್ಯಮ ಸವಾಲೋಚಕ ಬಿ.ಎಂ ನರೇಶ್ ಬಾಬು, ಕ್ಷೇತ್ರ ಸಮನ್ವಯಾಧಿಕಾರಿ ಜಿ.ಗಂಗರೆಡ್ಡಿ ಮತ್ತಿತರರು ಇದ್ದರು.

ಅಕ್ರಮ ಹೋಂಸ್ಟೇಗಳಿಗೆ ಕಡಿವಾಣ
ಜಿಲ್ಲೆಯ ಯಾವುದೇ ಭಾಗದಲ್ಲಿ ಪರವಾನಗಿ ಇಲ್ಲದೇ ಹೋಂಸ್ಟೇಗಳನ್ನು ನಡೆಸುವಂತಿಲ್ಲ. ಒಂದು ವೇಳೆ ಅಕ್ರಮ ಕೇಂದ್ರಗಳು ಕಂಡು ಬಂದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಎಡಿಸಿ ಭಾಸ್ಕರ್ ಸೂಚಿಸಿದರು. ನಂದಿಬೆಟ್ಟದ ಸುತ್ತಮುತ್ತಲ ಪ್ರದೇಶಗಳು ಸೇರಿ ಜಿಲ್ಲೆಯ ಸ್ಥಳೀಯಾಡಳಿತ ಸಂಸ್ಥೆಗಳ ಮುಖ್ಯಸ್ಥರು, ಪಿಡಿಒ ಆಯಾ ವ್ಯಾಪ್ತಿಯಲ್ಲಿ ಪರಿಶೀಲಿಸಿ, ಮಾಹಿತಿ ಸಂಗ್ರಹಿಸಬೇಕು. ಫಾರ್ಮ್ ಹೌಸ್‌ಗಳಲ್ಲಿ ಹೋಂಸ್ಟೇಗಳು ನಡೆಯುವ ಸಾಧ್ಯತೆ ಇದ್ದು ಇದಕ್ಕೆ ಅವಕಾಶ ನೀಡಬಾರದು. ಈ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ನಿಗಾವಹಿಸಬೇಕು ಎಂದು ತಿಳಿಸಿದರು. ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನ, ಆಹಾರ ಸುರಕ್ಷತಾ ಪರಿಶೀಲನೆ ಹಾಗೂ ಕೊಟ್ಪಾ ಅರಿವು ಕಾರ್ಯಕ್ರಮಗಳನ್ನು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಕೈಗೊಳ್ಳಬೇಕು ಎಂದರು.

881 ಪ್ರಕರಣ-69930 ರೂ. ದಂಡ
ಪ್ರಸಕ್ತ ಸಾಲಿನ ಏಪ್ರಿಲ್‌ನಿಂದ ಸೆಪ್ಟೆಂಬರ್‌ರವರೆಗೆ 49 ಕೋಟ್ಪಾ ದಾಳಿ ನಡೆಸಿ, 881 ಪ್ರಕರಣಗಳನ್ನು ದಾಖಲಿಸಲಾಗಿದೆ. ಹಾಗೆಯೇ 69,930 ರೂ. ದಂಡ ವಸೂಲಿಯಾಗಿದೆ. ಜಿಲ್ಲೆಯ ವಿವಿಧೆಡೆ 45 ಶಾಲಾ ಕಾಲೇಜುಗಳಲ್ಲಿ ಕೋಟ್ಪಾ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಇದರಲ್ಲಿ 7,416 ವಿದ್ಯಾರ್ಥಿಗಳು ಭಾಗವಹಿಸಿದ್ದು ತಂಬಾಕು ಉತ್ಪನ್ನಗಳ ಸೇವನೆಯ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಶ್ ಕುವಾರ್ ಸಭೆಗೆ ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net