ಕೊತ್ತದೊಡ್ಡಿಯಲ್ಲಿ ಚುಚ್ಚು ಮದ್ದಿನ ಜತೆ ಮತದಾನ ಜಾಗೃತಿ ಅಭಿಯಾನ

helath
ದೇವದುರ್ಗ ತಾಲೂಕು ಕೊತ್ತದೊಡ್ಡಿ ಅಂಗನವಾಡಿ ಕೇಂದ್ರದಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮತದಾನ ಜಾಗೃತಿ ಅಭಿಯಾನ ಜರುಗಿತು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಿವಪ್ಪ ಭೂಮನಗುಂಡ, ಈಶಮ್ಮ, ರೋಷನ್, ರಮಾ, ಸಂಗಮ್ಮ, ಲಕ್ಷ್ಮೀ, ರೇಣುಕಾ, ಲಕ್ಷ್ಮಿ ದೇವಿ, ಭೀಮವ್ವ ಇತರರಿದ್ದರು.
Published on

ದೇವದುರ್ಗ: ತಾಲೂಕಿನ ಕೊತ್ತದೊಡ್ಡಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಗು, ಗರ್ಭಿಣಿಯರಿಗೆ ಚುಚ್ಚು ಮದ್ದು ನೀಡುವ ಜತೆಗೆ ಮತದಾನ ಜಾಗೃತಿ ಅಭಿಯಾನ ಕಾರ್ಯಕ್ರಮ ಗುರುವಾರ ನಡೆಯಿತು.

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಿವಪ್ಪ ಭೂಮನಗುಂಡ ಮಾತನಾಡಿ, ಮತದಾನ ಪ್ರಮಾಣ ಹೆಚ್ಚಿಸಲು ಮತದಾನ ಜಾಗೃತಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಮಹಿಳೆಯರು, ಗರ್ಭಿಣಿ, ತಾಯಂದಿರು, ಬಾಣಂತಿಯರು ಹಾಗೂ ಮಗುವಿಗೆ ಚುಚ್ಚುಮದ್ದು ಹಾಕಲಾಗುತ್ತಿದೆ. ಇದರ ಜತೆಗೆ ಲಸಿಕೆಗೆ ಬರುವ ಮಹಿಳೆಯರಿಗೆ, ಮಗುವಿನ ಪಾಲಕರಿಗೆ ಮತದಾನ ಜಾಗೃತಿ ಮೂಡಿಸಲಾಗುತ್ತಿದೆ.

ಪ್ರಜಾಪ್ರಭುತ್ವಕ್ಕೆ ಅರ್ಥ

18ವರ್ಷ ತುಂಬಿದ ಪ್ರತಿಯೊಬ್ಬರಿಗೂ ಸಂವಿಧಾನ ಮತದಾನ ಮಾಡುವ ಹಕ್ಕನ್ನು ನೀಡಿದೆ. ಈ ಹಕ್ಕು ಚಲಾಯಿಸಿದಾಗ ಮಾತ್ರ ಪ್ರಜಾಪ್ರಭುತ್ವಕ್ಕೆ ಅರ್ಥಬರುತ್ತದೆ. ಮೇ 10ರಂದು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಬೇಕು. ಯಾವುದೇ ಆಸೆ, ಆಮಿಷಗಳಿಗೆ ಒಳಗಾಗಬಾರದು ಎಂದು ಸಲಹೆ ನೀಡಿದರು.

ನಂತರ ಕಡ್ಡಾಯ ಮತದಾನ ಮಾಡುವ ಬಗ್ಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮಲ್ಲಯ್ಯ ಹಿರೇಮಠ, ಸಮುದಾಯ ಆರೋಗ್ಯ ಅಧಿಕಾರಿ ಶಂಕರ ಹಳ್ಳಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net