

ಕೊಟ್ಟೂರು: ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ತಾಲೂಕಿನ ನಾನಾ ಗ್ರಾಮಗಳಿಂದ ಆಗಮಿಸಿದ ವಿವಿಧ ಪಕ್ಷಗಳ ಕಾರ್ಯಕರ್ತರು ವಿಜಯನಗರ ಜಿಲ್ಲಾಧ್ಯಕ್ಷ ಬೆನಕನಹಳ್ಳಿ ರೇವಣಸಿದ್ದಪ್ಪ ಸಮ್ಮುಖದಲ್ಲಿ ಸೇರ್ಪಡೆಯಾದರು.
ಸುದ್ದಿಗಾರರೊಂದಿಗೆ ಮಾತನಾಡಿದ ರೇವಣಸಿದ್ದಪ್ಪ, ನಮ್ಮ ಪಕ್ಷದಿಂದ 30 ರಿಂದ 40 ಸ್ಥಾನಗಳಿಗೆ ಸ್ಪರ್ಧಿಸಲು ಅಭ್ಯರ್ಥಿಗಳು ಸಿದ್ಧವಾಗಿದ್ದಾರೆ. ಹಗರಿಬೊಮ್ಮನಹಳ್ಳಿ ವಿಧಾನ ಸಭಾ ಕ್ಷೇತ್ರದಲ್ಲಿ ಮೂವರು ಮುಂದಾಗಿದ್ದಾರೆ. ಶೀಘ್ರದಲ್ಲಿ ಕೊಟ್ಟೂರು ಮತ್ತು ಗಾಣಗಟ್ಟೆಗೆ ಅರುಣಾ ರೆಡ್ಡಿ ನೇತೃತ್ವದಲ್ಲಿ ಬೃಹತ್ ಸಭೆ ನಡೆಯಲಿದೆ. ಈ ಭಾಗದ ಪ್ರಭಾವಿ ಮುಖಂಡರೊಬ್ಬರು ಪಕ್ಷ ಸೇರಲಿದ್ದಾರೆ ಎಂದು ಮುನ್ಸೂಚನೆ ನೀಡಿದರು.