ಅಪಪ್ರಚಾರವನ್ನು ಜನ ನಂಬಲ್ಲ

ashwathnarayana2019
ಡಾ.ಸಿ.ಎಸ್.ಅಶ್ವತ್ಥ ನಾರಾಯಣ
Published on

ಕೊಟ್ಟೂರು: ವಿಧಾನಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎಸ್.ಅಶ್ವತ್ಥ ನಾರಾಯಣ ವಿಶ್ವಾಸ ವ್ಯಕ್ತಪಡಿಸಿದರು. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯಲ್ಲಿ ಒಗ್ಗಟ್ಟಿದೆ. ಯಾವುದೇ ಗೊಂದಲವಿಲ್ಲ. ಕೆ.ಸಿ.ನಾರಾಯಣಗೌಡ, ವಿ.ಸೋಮಣ್ಣ ಪಕ್ಷ ತೊರೆಯುವುದಿಲ್ಲ. ರಾಜ್ಯ ಮತ್ತು ರಾಷ್ಟ್ರದಲ್ಲಿ ಬಿಜೆಪಿ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಲೆ ವ್ಯಾಪಕವಾಗಿದೆ. ವಿರೋಧ ಪಕ್ಷದವರು ಬಿಜೆಪಿ ಬಗ್ಗೆ ಏನೇ ಅಪಪ್ರಚಾರ ಮಾಡಿದರೂ ರಾಜ್ಯದ ಜನ ನಂಬಲ್ಲ. ಬದಲಿಗೆ ಬಿಜೆಪಿಯನ್ನೇ ಬೆಂಬಲಿಸುತ್ತಾರೆ.

ಮಾಡಾಳ್ ವಿರೂಪಾಕ್ಷಪ್ಪ ಅವರ ಪ್ರಕರಣ ಸಂಬಂಧ ಅವರನ್ನು ರಕ್ಷಣೆ ಮಾಡುವ ಕಾರ್ಯ ಮಾಡಿಲ್ಲ. ಅವರು ದೋಷಿ ಎಂದು ಕಂಡುಬಂದರೆ ಕೂಡಲೇ ಅವರನ್ನು ಬಂಧಿಸುವ ಕ್ರಮವನ್ನು ಸಂಬಂಧಪಟ್ಟವರು ಮಾಡಲಿದ್ದಾರೆ ಎಂದರು.

ಬಿಜಿಪಿ ಜಿಲ್ಲಾಧ್ಯಕ್ಷ ಪಿ.ಚನ್ನಬಸವನಗೌಡ, ಮಂಡಲ್ ಪ್ರಧಾನ ಕಾರ್ಯದರ್ಶಿ ಡಾ.ರಾಕೇಶ ಕೊಟ್ಟೂರು, ಘಟಕಾಧ್ಯಕ್ಷ ಬಿ.ಆರ್.ವಿಕ್ರಮ್, ಶ್ರೀನಿವಾಸ (ಬುಲ್), ಪ್ರಕಾಶ ಮಂಡಕ್ಕಿ, ಬಸವರಾಜ್ ಕೋನಾಪುರ್, ಆರ್.ಬೊಮ್ಮ, ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net