ಗ್ರಾಪಂಗಳಿಗೆ ಜಿಪಂ ಉಪ ಕಾರ್ಯದರ್ಶಿ ಭೇಟಿ

march 14 kottur 01
Published on

ಕೊಟ್ಟೂರು: ವಿಜಯನಗರ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ. ರಂಗನಾಥ, ಸೋಮವಾರ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ನರೇಗಾ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳನ್ನು ವೀಕ್ಷಿಸಿದರು.

ಉತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸಲು ಗ್ರಾಪಂ ಪಿಡಿಒ ಹಾಗೂ ತಾಂತ್ರಿಕ ಸಹಾಯಕರಿಗೆ ಸೂಚಿಸಿದರು. ನಂತರ ನರೇಗಾದಡಿ ಕೈಗೊಂಡಿರುವ ಅಮೃತ ಸರೋವರ ಮತ್ತು ಸ್ವಚ್ಛ ಭಾರತ ಮಿಷನ್ ಯೋಜನೆಯ ಕಡತಗಳನ್ನು ಪರಿಶೀಲಿಸಿ ಸೂಕ್ತರೀತಿಯಲ್ಲಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದರು. ಕೆ.ಅಯ್ಯನಹಳ್ಳಿ, ಅಂಬಳಿ, ಅಲಬೂರು, ಕೋಗಳಿ, ಗ್ರಾಪಂ ವ್ಯಾಪ್ತಿಯ ಕಾಮಗಾರಿಗಳನ್ನು ವೀಕ್ಷಣೆ ಮಾಡಿದರು.

ಜಿಪಂ ಸಹಾಯಕ ಕಾರ್ಯಕ್ರಮ ಸಮನ್ವಯಾಧಿಕಾರಿ ಬಸವರಾಜ್, ತಾಪಂ ಇಒ ಪರಮೇಶ್ವರಪ್ಪ, ಸಹಾಯಕ ನಿರ್ದೇಶಕ ಎಸ್. ವಿಜಯಕುಮಾರ್, ತಾಂತ್ರಿಕ ಸಂಯೋಜಕ ಶ್ರೀಕಾಂತ, ಐಇಸಿ ಸಂಯೋಜಕ ಪ್ರಭುಕುಮಾರ್ ಉಪ್ಪಾರ್, ತಾಂತ್ರಿಕ ಸಹಾಯಕರಾದ ಶ್ರೀಧರ, ರವಿನಾಯ್ಕ, ರಾಘವೇಂದ್ರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net