ಡಾ. ವೆಂಕಟೇಶ ತಿಪ್ಪೇಸ್ವಾಮಿ ಜೆಡಿಎಸ್‌ಗೆ ರಾಜೀನಾಮೆ

DR. TIPPESWAMI
Published on

ಕೊಟ್ಟೂರು: ಜೆಡಿಎಸ್‌ನ ವಿಜಯನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ. ವೆಂಕಟೇಶ ತಿಪ್ಪೇಸ್ವಾಮಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಗುರುವಾರ ರಾಜೀನಾಮೆ ನೀಡಿದ್ದಾರೆ.

ಏಳು ವರ್ಷಗಳಿಂದ ಹಗರಿಬೊಮ್ಮನಹಳ್ಳಿ ಕ್ಷೇತ್ರದಲ್ಲಿ ನಿಷ್ಣಾವಂತ ಕಾರ್ಯಕರ್ತನಾಗಿ ಪಕ್ಷದ ಸಂಘಟನೆ ಮಾಡಿದ್ದೇನೆ. ಇತ್ತೀಚಿನ ನಾಲ್ಕು ತಿಂಗಳಿಂದ ಪಕ್ಷದಲ್ಲಿ ನಡೆಯುತ್ತಿರುವ ರಾಜಕೀಯ ವಿದ್ಯಾಮಾನಗಳಿಂದ ಬೇಸರವಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಯಾವ ಪಕ್ಷಕ್ಕೆ ಸೇರಬೇಕೆಂದು ಎಂಬುದನ್ನು ಬೆಂಬಲಗಿರೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವೆ. ಜನ ಸೇವೆ ಮಾಡುವ ದೃಷ್ಟಿಯಿಂದ 4-5 ತಾಲೂಕು, ಜಿಲ್ಲಾ ಮಟ್ಟದ ಸರ್ಕಾರಿ ಹುದ್ದೆಗೆ ರಾಜೀನಾಮೆ ಕೊಟ್ಟು ಜೆಡಿಎಸ್ ಪಕ್ಷ ಸೇರಿದ್ದೆ ಎಂಬುದನ್ನು ಸ್ಮರಿಸಿಕೊಂಡರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net