

ಹಿರೇಕೆರೂರ: ಕರೊನಾ ಸೊಂಕಿತರಿಗೆ ಚಿಕಿತ್ಸೆ ನೀಡಲು ಜಿಲ್ಲೆಯ ಎಲ್ಲ ತಾಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಎಲ್ಲ ವ್ಯವಸ್ಥೆಯೊಂದಿಗೆ ಪ್ರತ್ಯೇಕ ವಾರ್ಡ್ಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಜೇಂದ್ರ ದೊಡ್ಮನಿ ತಿಳಿಸಿದರು.
ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಸಿದ್ಧಪಡಿಸಲಾಗುತ್ತಿರುವ ಕೋವಿಡ್ ಕೇರ್ ಸೆಂಟರ್ಗೆ ಬುಧವಾರ ಭೇಟಿ ನೀಡಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳು ಹೆಚ್ಚಾಗತೊಡಗಿದ್ದು, ತಾಲೂಕು ಸರ್ಕಾರಿ ಆಸ್ಪತ್ರೆಗಳಲ್ಲಿ ಕರೊನಾ ಕೇರ್ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಇಲ್ಲಿ ಪುರುಷರಿಗೆ, ಮಹಿಳೆಯರಿಗೆ ಪ್ರತ್ಯೇಕವಾಗಿ ಪ್ರತಿ ಕೇಂದ್ರಗಳಲ್ಲಿ 10 ಬೆಡ್, ಆಕ್ಸಿಜನ್, ವೆಂಟಿಲೇಟರ್ ಸೇರಿ ಚಿಕಿತ್ಸೆಗೆ ಬೇಕಾಗುವಂಥ ಎಲ್ಲ ವ್ಯವಸ್ಥೆಗಳನ್ನು ಒಳಗೊಂಡ 3 ವಾರ್ಡ್ಗಳನ್ನು ಸಿದ್ಧಗೊಳಿಸಲಾಗುತ್ತಿದೆ ಎಂದರು.
ತಾಲೂಕು ಆರೊಗ್ಯಾಧಿಕಾರಿ ಡಾ. ಹೊನ್ನಪ್ಪ ಜೆ.ಎಂ., ಡಾ.ಶ್ರೀಕಾಂತ ಆಚಾರ್ಯ ಹಾಗೂ ಆರೋಗ್ಯ ಸಹಾಯಕಿಯರು ಇದ್ದರು.