ಹುಬ್ಬಳ್ಳಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ರಾಜ್ಯ ಪದವೀಧರ ವಿಭಾಗದ ಉಪಾಧ್ಯಕ್ಷರನ್ನಾಗಿ ಯುವ ಚಿಂತಕ ನಾಗರಾಜ ಕೊಟಗಿ ಅವರನ್ನು ನೇಮಕ ಮಾಡಲಾಗಿದೆ.
ಕೆಪಿಸಿಸಿ ಯುವ ಘಟಕದ ಪ್ರಧಾನ ಕಾರ್ಯದರ್ಶಿಯಾಗಿದ್ದ ನಾಗರಾಜ ಅವರನ್ನು ಪದವೀಧರ ವಿಭಾಗದ ಉಪಾಧ್ಯಕ್ಷರಾಗಿ ನೇಮಿಸಲಾಗಿದೆ ಎಂದು ಪದವೀಧರ ವಿಭಾಗದ ಅಧ್ಯಕ್ಷ ಎ.ಎನ್. ನಟರಾಜಗೌಡರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.