ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ದ.ಕ ಜಿಲ್ಲೆಯಲ್ಲಿ 318 ಕಡೆ ವೀಕ್ಷಣೆ

cc
Published on

ಮಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮೂವರು ಕಾರ್ಯಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಗುರುವಾರ ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ನಡೆದಿದ್ದು, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿ ಸಹಿತ ಜಿಲ್ಲೆಯ 318 ಕಡೆ ಕಾರ್ಯಕರ್ತರಿಗೆ ನೇರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಶಾಸಕ ಜೆ.ಆರ್.ಲೋಬೊ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ, ಮುಡಾ ಮಾಜಿ ಅಧ್ಯಕ್ಷ ತೇಜೋಮಯ, ಮಾಜಿ ಮೇಯರ್‌ಗಳಾದ ಮಹಾಬಲ ಮಾರ್ಲ, ಕವಿತಾ ಸನಿಲ್, ಮುಖಂಡರಾದ ಸದಾಶಿವ ಉಳ್ಳಾಲ್, ಸಂತೋಷ್ ಕುಮಾರ್, ಯು.ಎಚ್.ಖಾಲಿದ್, ನಝೀರ್ ಬಜಾಲ್ ಮೊದಲಾದವರು ಉಪಸ್ಥಿತರಿದ್ದರು. ದೀಪ ಬೆಳಗಿಸಿದ ಬಳಿಕ, ಕಾಂಗ್ರೆಸ್ ಪ್ರತಿಜ್ಞೆ ಸ್ವೀಕರಿಸಲಾಯಿತು.
ಟಿವಿ, ಎಲ್‌ಸಿಡಿ ಪರದೆ, ಝೂಮ್ ಆಪ್ ಮೂಲಕ ಜಿಲ್ಲಾ ಮಟ್ಟದಲ್ಲಿ ಮಾತ್ರವಲ್ಲದೆ, ತಾಲೂಕು, ಬ್ಲಾಕ್, ಗ್ರಾಮ ಮಟ್ಟದಲ್ಲಿ ಕಾರ್ಯಕ್ರಮ ನೇರ ವೀಕ್ಷಣೆಗೆ ವ್ಯವಸ್ಥೆ ಮಾಡಿದ್ದರು. ಒಂದು ಲಕ್ಷಕ್ಕಿಂತಲೂ ಅಧಿಕ ಕಾರ್ಕರ್ತರು ಕಾರ್ಯಕ್ರಮ ವೀಕ್ಷಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net