ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಸಂಭ್ರಮ; ಜಿಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತ ಅಧ್ಯಕ್ಷರಿಂದ ಪ್ರತಿಜ್ಞಾವಿಧಿ ಸ್ವೀಕಾರ

1
Published on

ಬೆಂಗಳೂರು ಗ್ರಾಮಾಂತರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪದಗ್ರಹಣ ಕಾರ್ಯಕ್ರಮವನ್ನು ದೇವನಹಳ್ಳಿ ತಾಲೂಕಿನ ಕನ್ನಮಂಗಲದಲ್ಲಿ ಗುರುವಾರ ನೂರಾರು ಕಾರ್ಯಕರ್ತರು ಕಣ್ತುಂಬಿಕೊಂಡರು.

ಗ್ರಾಮಾಂತರ ಜಿಲ್ಲೆ ಜಿಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಕೆ.ಸಿ.ಮಂಜುನಾಥ್ ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾಂಗ್ರೆಸ್‌ನಿಂದಲೇ ದೇಶದ ಪ್ರಗತಿ ಸಾಧ್ಯ. ದೇಶದಲ್ಲಿ ಬದಲಾವಣೆ ಬೀಸಲು ಕಾಂಗ್ರೆಸ್ ಅನಿವಾರ್ಯವಾಗಿದೆ. ತಳಮಟ್ಟದಿಂದ ಪಕ್ಷ ಸಂಘಟನೆ ಮಾಡಬೇಕು ಎಂದು ಕೆ.ಸಿ.ಮಂಜುನಾಥ್ ಕರೆ ನೀಡಿದರು.

ಕಾಂಗ್ರೆಸ್‌ಗೆ ಉತ್ತಮ ಇತಿಹಾಸವಿದೆ. ಒಗ್ಗಟ್ಟು, ಸಂಘಟನೆ ನಮ್ಮೆಲ್ಲರ ಮೂಲ ಮಂತ್ರವಾಗಬೇಕು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾರ್ಗದರ್ಶನದಲ್ಲಿ ಪಕ್ಷ ಸಂಘಟಿಸೋಣ ಎಂದು ಸ್ಥಳೀಯ ಕಾಂಗ್ರೆಸ್ ಮುಖಂಡರು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ಮಾಜಿ ಶಾಸಕ ವೆಂಕಟಸ್ವಾಮಿ, ಕೆಪಿಸಿಸಿ ಸದಸ್ಯ ಕೆ.ಪಟಾಲಪ್ಪ, ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಕೆ.ಆರ್.ನಾಗೇಶ್, ಎಸ್ಟಿ ಜಿಲ್ಲಾ ಉಪಾಧ್ಯಕ್ಷ ಕೆ.ಎಂ ಲಕ್ಷ್ಮಿಕಾಂತ್, ಬ್ಲಾಕ್ ಉಪಾಧ್ಯಕ್ಷ ಎಚ್.ಜಿ. ಮಂಜುನಾಥ್, ಮುಖಂಡರಾದ ದುಬೈ ಮಂಜುನಾಥ್, ಬಂಗಾರಪ್ಪ, ನರಸಿಂಹಮೂರ್ತಿ, ಸೋಮಶೇಖರ್, ಸಂದೀಪ್ ಮತ್ತಿತರರಿದ್ದರು.

ಜಿಲ್ಲೆಯ ವಿವಿಧೆಡೆ ಕಾರ್ಯಕ್ರಮ: ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಪದ ಗ್ರಹಣ ಕಾರ್ಯಕ್ರಮವನ್ನು ಜಿಲ್ಲೆಯ ಎಲ್ಲೆಡೆ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net