

ಪುತ್ತೂರು ಗ್ರಾಮಾಂತರ: ಸರ್ವೆ ಗ್ರಾಮದ ಕಲ್ಪಣೆ ಸರ್ಕಾರಿ ಶಾಲೆಯಲ್ಲಿ ಮುಂದಿನ ದಿನಗಳಲ್ಲಿ ಜೂನಿಯರ್ ಕಾಲೇಜು, ಕೆಪಿಎಸ್ ಮಾದರಿ ಶಾಲೆಯನ್ನು ತರಿಸಲು ಪ್ರಯತ್ನಿಸುತ್ತೇನೆ. ಈ ಕುರಿತು ಈಗಾಗಲೇ ಶಿಕ್ಷಣ ಸಚಿವ ಮಧು ಬಂಗಾರಪ್ಪ ಜತೆ ಸಮಾಲೋಚನೆ ಮಾಡಿದ್ದೇನೆ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದರು. ಸರ್ವೆ ಗ್ರಾಮದ ಕಲ್ಪಣೆ ಸರ್ಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕೋತ್ಸವದಲ್ಲಿ ಮಾತನಾಡಿದರು.
ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಅಗತ್ಯ. ಇಲ್ಲಿನ ಶಿಕ್ಷಣದ ಅಭಿವೃದ್ಧಿಗೆ ಪೂರಕ ಕಟ್ಟಡ ಮತ್ತು ಇನ್ನಿತರ ಸವಲತ್ತು ಒದಗಿಸಲು ಪ್ರಯತ್ನಿಸುತ್ತೇನೆ ಎಂದರು.
ನಿಕಟಪೂರ್ವ ಮುಖ್ಯಶಿಕ್ಷಕ ಜಯರಾಮ್ ಶೆಟ್ಟಿ ಕೆ. ಉದ್ಘಾಟಿಸಿದರು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಸಿದ್ದೀಕ್ ಸುಲ್ತಾನ್ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. ಶಾಸಕ ಅಶೋಕ್‌ಕುಮಾರ್ ರೈ ಅವರನ್ನು ಗೌರವಿಸಲಾಯಿತು. ಮುಖ್ಯಶಿಕ್ಷಕಿ ಉಮಾವತಿ ವರದಿ ವಾಚಿಸಿದರು.
ಜಿ.ಪಂ. ಮಾಜಿ ಉಪಾಧ್ಯ ಎಂ.ಎಸ್.ಮಹಮ್ಮದ್, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಶಾಲಾ ನಿಕಟಪೂರ್ವ ಕಾರ್ಯಾಧ್ಯಕ್ಷ ಕರುಣಾಕರ ಗೌಡ ಎಲಿಯ, ಕಲ್ಪಣೆ ಪ್ರಾಥಮಿಕ ಶಾಲೆ ಎಸ್‌ಡಿಎಂಸಿ ಅಧ್ಯಕ್ಷ ಕೆ.ಎಂ.ಹನೀಫ್ ರೆಂಜಲಾಡಿ, ಮುಂಡೂರು ಗ್ರಾ.ಪಂ. ಮಾಜಿ ಸದಸ್ಯರಾದ ಗಣೇಶ್ ನೇರೋಳ್ತಡ್ಕ, ಯತೀಶ್ ರೈ ಮೇಗಿನಗುತ್ತು, ರಾಮಚಂದ್ರ ಸೊರಕೆ, ಶಾಲಾಭಿವೃದ್ದಿ ಸಮಿತಿ ಸದಸ್ಯರಾದ ಅಝೀಝ್ ರೆಂಜಲಾಡಿ, ಕಾಂಗ್ರೆಸ್ ಮುಖಂಡ ಶಶಿಕುಮಾರ್ ರೈ ನೂಜಿಬೈಲು, ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಕಮಲಾ, ಹರೀಶ್ ಆಚಾರ್ಯ, ತಾಜು ರಫೀಕ್, ಉದಯ ಕುಮಾರ್, ಕಾಂಚನಾ, ವೆಂಕಟೇಶ್, ಉಮಾಶಂಕರ್, ಜ್ಯೋತಿ ಮತ್ತಿತರರು ಉಪಸ್ಥಿತರಿದ್ದರು.
ಶಿಕ್ಷಕ ಸಹದೇವ್ ಸ್ವಾಗತಿಸಿದರು. ಶಿಕ್ಷಕಿ ಉಮೈರಾ ತಬಸ್ಸಮ್ ವಂದಿಸಿದರು. ಜಾರ್ಜ್ ಹಾಗೂ ನಳಿನಿ ಕಾರ್ಯಕ್ರಮ ನಿರೂಪಿಸಿದರು.