

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ಗ್ರೂಪ್ -ಬಿ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಯಾವುದೇ ಲೋಪದೋಷಗಳಿಗೆ ಆಸ್ಪದ ನೀಡದೇ ಸುಗಮವಾಗಿ ನಿರ್ವಹಿಸಲು ಬಿಗಿ ಕ್ರಮ ಕೈಗೊಳ್ಳಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ನೇತೃತ್ವದಲ್ಲಿ ಪೂರ್ವ ಸಿದ್ಧತಾ ಸಭೆಯಲ್ಲಿ ಯಶಸ್ವಿಯಾಗಿ ನಿರ್ವಹಣೆಯ ಬಗ್ಗೆ ಚರ್ಚಿಸಲಾಯಿತು.
ವಿವಿಧ ಇಲಾಖೆಗಳ ಗ್ರೂಪ್ -ಬಿ ಮೂಲ ವೃಂದದಲ್ಲಿ ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆಯು ಜ.19 ಮತ್ತು ಜ.25 ರಂದು ರಾಜ್ಯಾದ್ಯಂತ ನಡೆಯುತ್ತಿದ್ದು ಜಿಲ್ಲೆಯಲ್ಲಿಯೂ ಯಾವುದೇ ಲೋಪದೋಷಗಳಾಗದಂತೆ ಸುಗಮ, ಸುವ್ಯವಸ್ಥಿತವಾಗಿ ಕೈಗೊಳ್ಳಬೇಕು ಎಂದು ಪಿ.ಎನ್.ರವೀಂದ್ರ ಅಧಿಕಾರಿಗಳಿಗೆ ಸೂಚಿಸಿದರು.
ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ನಿಷೇಧಾಜ್ಞೆಯನ್ನು ಘೋಷಿಸಿದ್ದು ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸಲಾಗುತ್ತದೆ. ಅಭ್ಯರ್ಥಿಗಳು, ಅಧಿಕಾರಿಗಳು ಕಡ್ಡಾಯವಾಗಿ ನಿಯಮವನ್ನು ಪಾಲಿಸಬೇಕೆಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎನ್ ಭಾಸ್ಕರ್, ಉಪ ಪೊಲೀಸ್ ವರಿಷ್ಠಾಧಿಕಾರಿ ಶಿವ ಕುಮಾರ್, ವಿಷಯ ಪರಿವೀಕ್ಷಕ ಜಮೀರ್ ಪಾಷಾ ಮತ್ತಿತರರು ಇದ್ದರು.
*ಸುಗಮ ಪರೀಕ್ಷೆ ಬಗ್ಗೆ ಚರ್ಚೆ
ಸುಗಮವಾಗಿ ಪರೀಕ್ಷೆ ನಿರ್ವಹಿಸುವ ನಿಟ್ಟಿನಲ್ಲಿ ನಿಯಮಗಳ ಪಾಲನೆಯ ಬಗ್ಗೆ ಚರ್ಚಿಸಲಾಯಿತು.
ಗುರುತು ಪತ್ತೆ ಹಚ್ಚಲು ಸಾಧ್ಯವಾಗದ ರೀತಿಯಲ್ಲಿ ವಸ್ತ್ರ ಧರಿಸಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳನ್ನು ಫ್ರಿಸ್ಕಿಂಗ್, ಪರೀಕ್ಷಾರ್ಥಿಗಳು ಕೊಠಡಿಯೊಳಗೆ ಮೊಬೈಲ್ ಫೋನ್ ಸೇರಿದಂತೆ ಇತರ ಎಲೆಕ್ಟ್ರಾನಿಕ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದಕ್ಕೆ ರ್ನಿಬಂಧ, ಪರೀಕ್ಷಾ ದಿನದಂದು ಮಾರ್ಗಾಧಿಕಾರಿಗಳ ತಂಡದ ಬೆಂಗಾವಲು, ಪ್ರತಿ ಪರೀಕ್ಷಾ ಕೇಂದ್ರಕ್ಕೆ ಅವಶ್ಯಕತೆಗೆ ಅನುಗುಣವಾಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸುವುದು ಸೇರಿದಂತೆ ವಿವಿಧ ನಿಯಮಗಳ ಪಾಲನೆಯ ಅಗತ್ಯತೆ ಬಗ್ಗೆ ಚರ್ಚಿಸಲಾಯಿತು.
*12 ಪರೀಕ್ಷಾ ಕೇಂದ್ರಗಳು
ಪರೀಕ್ಷೆಗೆ ಚಿಕ್ಕಬಳ್ಳಾಪುರದಲ್ಲಿ 12 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಿದ್ದು ಜ.19 ರಂದು ನಡೆಯುವ ಸಾಮಾನ್ಯ ಪತ್ರಿಕೆ ಪರೀಕ್ಷೆಗೆ ಹಾಗೂ ಜ.25 ರಂದು ರ್ನಿದಿಷ್ಟ ಪತ್ರಿಕೆ ಪರೀಕ್ಷೆಗೆ 4,499 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊAಡಿದ್ದಾರೆ. ಈಗಾಗಲೇ ಪರೀಕ್ಷಾ ಕೊಠಡಿಗಳಲ್ಲಿ ವಿದ್ಯುತ್, ಕುಡಿಯುವ ನೀರು, ಸ್ವಚ್ಛತೆ, ಶೌಚಗೃಹ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳ ವ್ಯವಸ್ಥೆ ಕೈಗೊಳ್ಳಲಾಗಿದೆ.