ತರೀಕೆರೆ ವ್ಯವಸಾಯೋತ್ಪನ್ನ ಸಹಕಾರ ಸಂಘಕ್ಕೆ ಆನಂದಪ್ಪ ಅಧ್ಯಕ್ಷ

web 6
Published on

ತರೀಕೆರೆ: ಪಟ್ಟಣದ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ನೂತನ ಆಡಳಿತ ಮಂಡಳಿ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಶಂಭೈನೂರು ಆನಂದಪ್ಪ ಹಾಗೂ ಉಪಾಧ್ಯಕ್ಷರಾಗಿ ಕೆ.ಆರ್.ಜಯಣ್ಣ ಅವಿರೋಧ ಆಯ್ಕೆಯಾದರು.

ನೂತನ ಆಡಳಿತ ಮಂಡಳಿ ನಿರ್ದೇಶಕ ಸ್ಥಾನಗಳಿಗೆ ನ.8 ರಂದು ಚುನಾವಣೆ ನಿಗದಿಯಾಗಿತ್ತು. ಚುನಾವಣೆ ಮುನ್ನ ಎಲ್ಲಾ 14 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದ್ದು, ಬಿಜೆಪಿ ಬೆಂಬಲಿತ 11, ಕಾಂಗ್ರೆಸ್, ಪಕ್ಷೇತರ ಮತ್ತು ಜೆಡಿಎಸ್ ಬೆಂಬಲಿತ ತಲಾ ಒಬ್ಬೊಬ್ಬರು ನಿರ್ದೇಶಕರಾಗಿ ಅವಿರೋಧ ಆಯ್ಕೆಯಾಗಿದ್ದರು.

ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಶಂಭೈನೂರು ಆನಂದಪ್ಪ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಕೆ.ಆರ್.ಜಯಣ್ಣ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಸಹಕಾರ ಇಲಾಖೆ ಸಹಾಯಕ ನಿಬಂಧಕ ಜಿ.ಎಚ್.ಹರೀಶ್ ಅವಿರೋಧ ಆಯ್ಕೆ ಘೊಷಿಸಿದರು.

ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಅಭಿನಂದಿಸಿದ ಶಾಸಕ ಡಿ.ಎಸ್.ಸುರೇಶ್ ಅಭಿನಂದಿಸಿ ಮಾತನಾಡಿ, ಸಹಕಾರಿ ಕ್ಷೇತ್ರ ರೈತ ಸ್ನೇಹಿಯಾಗಿದ್ದು, ನೂತನ ನಿರ್ದೇಶಕರು ರೈತರ ಹಿತಾಸಕ್ತಿಗೆ ಶ್ರಮಿಸಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net