ಕಲಾಪ ಬಹಿಷ್ಕರಿಸಿ ವಕೀಲರ ಪ್ರತಿಭಟನೆ

23krp-01
Published on

ಕೆ.ಆರ್.ಪೇಟೆ: ಮೈಸೂರು ವಿವಿ ಫ್ರೀ ಕಾಶ್ಮೀರ ಫಲಕ ಪ್ರದರ್ಶನ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಅವರು ವಕೀಲರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಗುರುವಾರ ಪಟ್ಟಣದಲ್ಲಿ ವಕೀಲರು ಕಲಾಪ ಬಹಿಷ್ಕರಿಸಿ ನ್ಯಾಯಾಲಯದ ಎದುರು ಪ್ರತಿಭಟನೆ ನಡೆಸಿದರು.

ವಕೀಲ ರಾಜೇಗೌಡ ಮಾತನಾಡಿ, ಸಿದ್ದರಾಮಯ್ಯ ಸಮಾಜದಲ್ಲಿ ಗಣ್ಯ ವ್ಯಕ್ತಿಯಾಗಿದ್ದಾರೆ. ಅವರು ಸಹ ವಕೀಲರಾಗಿ ಸೇವೆ ಸಲ್ಲಿಸಿದ್ದಾರೆ. ಆದರೆ ವಕೀಲರು ಗುಂಡಾಗಳು ಎಂದು ಹೇಳುವ ಮೂಲಕ ವಕೀಲ ಸಮಾಜಕ್ಕೆ ಅವಮಾನ ಮಾಡಿದ್ದಾರೆ. ಈ ಕೂಡಲೇ ವಕೀಲರನ್ನು ಬೇಷರತ್ತು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ವಕೀಲರಾದ ಬೋರೇಗೌಡ, ಮಂಜುನಾಥ್, ಸುಕನ್ಯಾ, ಸ್ವರೂಪ, ಕೆ.ಎನ್.ನಾಗರಾಜು, ಕೆರೆಮೇಗಳಕೊಪ್ಪಲು ಶಂಕರೇಗೌಡ, ಕೆರಾಣಿ ಸೇರಿದಂತೆ ನೂರಾರು ವಕೀಲರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net