ಕೆಆರ್‌ಐಡಿಎಲ್ ಇಇ ಅನಿಲ್ ಕುಮಾರ್ ವಜಾ

Published on

ರಾಯಚೂರು: ಸಿಂಧನೂರು ತಾಲೂಕಿನಲ್ಲಿ 2021-22 ಸಾಲಿನಲ್ಲಿ ನಡೆದ ಮೂರು ಕೋಟಿ ರೂ. ಕಾಮಗಾರಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ (ಕೆಆರ್‌ಐಡಿಎಲ್) ಇಇ ಅನಿಲ್ ಕುಮಾರ್ ಗೋಖಲೆಯನ್ನು ಸೇವೆಯಿಂದ ವಜಾಗೊಳಿಸಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮೇ 14 ರಂದು ಕೆಆರ್‌ಐಡಿಎಲ್‌ನ ವ್ಯವಸ್ಥಾಪಕ ನಿರ್ದೇಶಕ ಬಸವರಾಜು ಅವರು ಅನಿಲ್ ಕುಮಾರ್ ಅವರನ್ನು ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ. ಕಾಮಗಾರಿ ತನಿಖೆ ವೇಳೆ ಅಮಾನತು ಮಾಡಲಾಗಿತ್ತು. ಇದೀಗ ತನಿಖೆಯಲ್ಲಿ ಅಕ್ರಮ ನಡೆಸಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಅನಿಲ್ ಕುಮಾರ್ ಅವರನ್ನು ಸೇವೆಯಿಂದ ವಜಾಗೊಳಿಸಿ ಆರ್ಥಿಕ ನಷ್ಟ ತುಂಬಿಕೊಡುವಂತೆ ಆದೇಶಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net