ಇಂದಿನಿಂದ ಕ್ರೈಸ್​ ಸಿಬ್ಬಂದಿ ಧರಣಿ: ಬೇಡಿಕೆ ಈಡೇರಿಸದಿದ್ದರೆ ತರಗತಿ ಬಹಿಷ್ಕಾರದ ಎಚ್ಚರಿಕೆ

KRIS staff
Published on

ಬೆಂಗಳೂರು: ವಸತಿ ಶಾಲೆಗಳ ನಿರ್ದೇಶ ನಾಲಯ ರಚನೆ ಸೇರಿ ಹಲವು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕ್ರೈಸ್​) ಕಾಯಂ ಶಿಕ್ಷಕರು ಹಾಗೂ ನೌಕರರು ಸೋಮವಾರದಿಂದ (ಮೇ 26) ಫ್ರೀಡಂಪಾರ್ಕ್​ನಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ.

ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ಕಲ್ಯಾಣ ಇಲಾಖೆ ಅಡಿಯ ವಸತಿ ಶಾಲೆಗಳನ್ನು ಸಿಬ್ಬಂದಿಗೆ ಸಂಬಂಧಿಸಿದ ಇಲಾಖೆಗಳ ವಶಕ್ಕೆ ನೀಡಬೇಕು. ನಗದುರಹಿತ ಚಿಕಿತ್ಸೆಗಾಗಿ ಜ್ಯೋತಿ ಸಂಜೀವಿನಿ ಅನುಷ್ಠಾನ ಮಾಡಬೇಕು. ಮರಣ ಮತ್ತು ನಿವೃತ್ತಿ ಉಪದಾನ ಸೌಲಭ್ಯ ಕಲ್ಪಿಸಬೇಕು. ಮನೆ ಬಾಡಿಗೆ ಭತ್ಯೆ ಕಡಿತದಿಂದ ವಿನಾಯಿತಿ ನೀಡಬೇಕು. ಹೆಚ್ಚುವರಿ ಕಾರ್ಯಾಭಾರ ಇರುವುದರಿಂದ ಶೇ.10 ವಿಶೇಷ ಭತ್ಯೆ ಮಂಜೂರು ಮಾಡಬೇಕು. ಸರ್ಕಾರ ನಮ್ಮ ಬೇಡಿಕೆ ಈಡೇರಿಸದಿದ್ದರೆ 30ರಿಂದ ತರಗತಿ ಬಹಿಷ್ಕರಿಸಿ ಧರಣಿ ನಡೆಸುವುದಾಗಿ ಎಚ್ಚರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net