

ಧಾರವಾಡ: ಕೃಷಿ ಕಾಮಧೇನು ಮಾಸಪತ್ರಿಕೆಯ 15ನೇ ವಾರ್ಷಿಕೋತ್ಸವದ ಅಂಗವಾಗಿ ‘ಕೃಷಿ ಕಾಮಧೇನು’ ಪ್ರಶಸ್ತಿ ಪ್ರದಾನ ಹಾಗೂ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮವನ್ನು ಜೂ. 11ರಂದು ಬೆಳಗ್ಗೆ 10.30 ಗಂಟೆಗೆ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ ಎಂದು ಮಾಸಪತ್ರಿಕೆಯ ಸಂಪಾದಕ, ಪ್ರಕಾಶಕ ಡಾ. ವಿರೂಪಾಕ್ಷ ಬಡಿಗೇರ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಸೇವೆ ಕ್ಷೇತ್ರದಲ್ಲಿ ಶಿಗ್ಗಾಂವಿ ತಾಲೂಕಿನ ಧುಂಡಶಿಯ ಶಿವಣ್ಣ ಬಡಿಗೇರ, ಕೃಷಿ, ತೋಟಗಾರಿಕೆ ಕ್ಷೇತ್ರದಲ್ಲಿ ಕಲಘಟಗಿ ತಾಲೂಕಿನ ತಬಕದಹೊನ್ನಳ್ಳಿಯ ಚಂದ್ರಶೇಖರ ಪಾಟೀಲ, ಸಾಹಿತ್ಯ, ಶಿಕ್ಷಣ ಕ್ಷೇತ್ರದ ಸಾಧನೆಗಾಗಿ ಬಾಗಲಕೋಟೆ ಜಿಲ್ಲೆ ಬೆನ್ನೂರಿನ ಡಾ. ವೀರೇಶ ಎಸ್. ಬಡಿಗೇರ ಅವರಿಗೆ ‘ಕೃಷಿ ಕಾಮಧೇನು’ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಾಯೋಜಕರ ಸಹಕಾರದೊಂದಿಗೆ ತಲಾ 5 ಸಾವಿರ ರೂ. ನಗದು ನೀಡಲಾಗುವುದು ಎಂದರು.
ಸಿ.ಸಿ. ಮಾಯಾಚಾರಿ, ಬಾಸ್ಕರ ಬಡಿಗೇರ ಸುದ್ದಿಗೋಷ್ಠಿಯಲ್ಲಿದ್ದರು.