ಪ್ರಶಸ್ತಿ ಪ್ರದಾನ ಮಾಡಿದ ಕೃಷ್ಣ ಭೈರೇಗೌಡ

28ark-1
Published on


ಅರಕಲಗೂಡು : ಬೆಂಗಳೂರಿನ ವಿಕಾಸ ಸೌಧದಲ್ಲಿ ಕಂದಾಯ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಕಂದಾಯ ಸಚಿವ ಕೃಷ್ಣ ಭೈರೇಗೌಡ, ಅರಕಲಗೂಡು ತಾಲೂಕು ಪರವಾನಗಿ ಭೂ ಮಾಪಕ ಹೇಮಂತ್ ಕುಮಾರ್ ವಿ.ಬೆಟ್ಟಸೋಗೆ, ಹಾಸನ ಭೂ ದಾಖಲೆಗಳ ಉಪ ನಿರ್ದೇಶಕ ಎಚ.ಎಸ್. ಸುಜಯ್ ಕುಮಾರ್, ಚನ್ನರಾಯಪಟ್ಟಣ ತಾಲೂಕು ಭೂ ದಾಖಲೆಗಳ ಸಹಾಯಕ ನಿರ್ದೇಶಕ ಎಚ್.ಸಿ. ಲಲ್ಲು ಪ್ರಸಾದ್, ಹಾಸನ ತಾಲೂಕು ಸರ್ಕಾರಿ ಭೂ ಮಾಪಕ ಸಿ.ಎಂ. ಕುಮಾರ್ ಅವರಿಗೆ ಅಭಿನಂದನಾ ಪತ್ರ ಮತ್ತು ಪ್ರಶಸ್ತಿ ಪ್ರದಾನ ಮಾಡಿದರು.


ಭೂ ಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಆಯುಕ್ತ ಜೆ.ಮಂಜುನಾಥ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಕಂದಾಯ ಆಯಕ್ತ ಸುನಿಲ್ ಕುಮಾರ್, ಭೂ ಮಾಪನ ಇಲಾಖೆಯ ಹೆಚ್ಚುವರಿ ನಿರ್ದೇಶಕ ಕೆ. ಜಯಪ್ರಕಾಶ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ವಿ.ರಶ್ಮಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net