ಬ್ರೈನಿ ಬಿಜ್ ಬಾಲ ವಿಕಾಸನ ಸಂಸ್ಥೆಯಲ್ಲಿ ಕೃಷ್ಣ ಜನ್ಮಾಷ್ಟಮಿ

26ss2putaanigalu
Published on

ಶನಿವಾರಸಂತೆ : ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪಟ್ಟಣದ ಬ್ರೈನಿ ಬಿಜ್ ಬಾಲ ವಿಕಾಸನ ಸಂಸ್ಥೆಯಿಂದ ಗುಡುಗಳಲೆ ಆರ್.ವಿ.ಕಲ್ಯಾಣ ಮಂಟಪದಲ್ಲಿ ಬಾಲ ವಿಕಾಸನ ಸಂಸ್ಥೆಯ ಮಕ್ಕಳಿಗೆ ಕೃಷ್ಣ, ರುಕ್ಮಿಣಿಯ ಛದ್ಮವೇಶ ಸ್ಫರ್ಧಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.


ಶನಿವಾರಸಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾಹರೀಶ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬಾಲ್ಯ ವಿಕಾಸನ ಹಂತದಲ್ಲಿ ಪುಟಾಣಿಗಳಿಗೆ ಛದ್ಮವೇಶ ಕಾರ್ಯಕ್ರಮ ಹಮ್ಮಿಕೊಳ್ಳುವುದರಿಂದ ಪುಟಾಣಿಗಳಲ್ಲಿ ಪ್ರತಿಭೆ ಹೊರಹೊಮ್ಮಲು ಸಹಕಾರಿಯಾಗುತ್ತದೆ ಎಂದರು.


ಶನಿವಾರಸಂತೆ ಕ್ಲಸ್ಟರ್ ಸಿಆರ್‌ಪಿ ದಿನೇಶ್ ಮಾತನಾಡಿ, ಸಂಸ್ಥೆ ಇತ್ತೀಚೆಗೆ ಪ್ರಾರಂಭಗೊಂಡಿದ್ದರೂ ಮಕ್ಕಳಿಗೆ ಪ್ರತಿಭೆಗೆ ಪೂರಕವಾಗಿ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು. ಸಂಸ್ಥೆಯ ಅಧ್ಯಕ್ಷ ಚೇತನ್ ಅಧ್ಯಕ್ಷತೆ ವಹಿಸಿದ್ದರು. ಖಜಾಂಜಿ ಕೃತಿಕಾ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net