

ಹೆಬ್ರಿ: ಹೆಬ್ರಿಯ ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಅಧ್ಯಕ್ಷ ಎಚ್.ನಾಗರಾಜ್ ಶೆಟ್ಟಿ ಉದ್ಘಾಟಿಸಿದರು.
ಕೃಷ್ಣ, ರಾಧೆ ವೇಷಧಾರಿ ಪುಟಾಣಿಗಳ ಮೆರವಣಿಗೆ ನಡೆಯಿತು. ವಿದ್ಯಾರ್ಥಿಗಳಿಂದ ಕೃಷ್ಣನ ಲೀಲೆ ಬಣ್ಣಿಸುವ ವಿವಿಧ ನೃತ್ಯ, ಭಜನೆ, ಹುಲಿ ಕುಣಿತ, ಸಾಂಸ್ಕೃತಿಕ ಕಾರ್ಯಕ್ರಮ, ಮೊಸರು ಕುಡಿಕೆ, ಶಂಖ ಜಾಗಟೆ, ಕೊಳಲು ವಾದನ, ಕೀಬೋರ್ಡ್, ಸ್ಯಾಕ್ಸೋಫೋನ್ ಕಾರ್ಯಕ್ರಮ ಜರುಗಿತು. ಬಳಿಕ ವಿದ್ಯಾರ್ಥಿಗಳಿಗೆ ಪಂಚಕಜ್ಜಾಯ ವಿತರಿಸಲಾಯಿತು.
ಎಸ್.ಆರ್ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಪ್ರಶಾಂತ್, ಎಸ್.ಆರ್. ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲೆ ಭಗವತಿ, ಉಪ ಪ್ರಾಂಶುಪಾಲ ದೀಪಕ್ ಎನ್., ಪ್ರೌಢ ಶಾಲೆ ಮುಖ್ಯಶಿಕ್ಷಕ ಗೋಪಾಲ ಆಚಾರ್ಯ, ಸಂಸ್ಥೆ ಶಿಕ್ಷಕರು, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕನ್ನಡ ಶಿಕ್ಷಕ ನಾಗೇಶ್ ಕಾರ್ಯಕ್ರಮ ನಿರೂಪಿಸಿದರು.