ಭಕ್ತರ ಸಂಕಷ್ಟ ನಿವಾರಕ ಶ್ರೀಕೃಷ್ಣ

MKG1B
Published on

ಸಾಸ್ವೆಹಳ್ಳಿ: ಶ್ರೀಕೃಷ್ಣ ಪರಮಾತ್ಮ ಭಕ್ತರ ಸಂಕಷ್ಟಗಳ ನಿವಾರಣೆಗಾಗಿ ಅವತರಿಸಿದ ಮಹಾನ್ ಪುರುಷ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಬಣ್ಣಿಸಿದರು.

ಹೋಬಳಿಯ ಹನಗವಾಡಿ ಗ್ರಾಮದಲ್ಲಿ ಬುಧವಾರ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಹಮ್ಮಿಕೊಂಡಿದ್ದ ಧರ್ಮಸಭೆಯಲ್ಲಿ ಮಾತನಾಡಿದರು.

ಭಗವಾನ್ ಶ್ರೀಕೃಷ್ಣ ಧರ್ಮದ ಸಂದೇಶವನ್ನು ಇಡೀ ಜಗತ್ತಿಗೆ ಸಾರಿದ್ದು, ದುಷ್ಟರಿಗೆ ಶಿಕ್ಷೆ, ಶಿಷ್ಟರ ರಕ್ಷಣೆಗಾಗಿ ಜನ್ಮತಾಳಿದ ದೇವರು ಎಂದು ಹೇಳಿದರು.

ಕೊಟ್ಟೂರು ಸೋಮೇಶ್ವರ ಸ್ವಾಮೀಜಿ ಮಾತನಾಡಿ, ಪ್ರತಿಯೊಬ್ಬರೂ ಭಗವದ್ಗೀತೆಯ ಸಾರವನ್ನು ತಿಳಿದುಕೊಂಡು ಜೀವನದಲ್ಲಿ ಅದನ್ನು ಅಳವಡಿಸಿಕೊಳ್ಳಬೇಕೆಂದರು.

ನಾವು ಎಷ್ಟು ವರ್ಷ ಬದುಕಿರುತ್ತೇವೆ ಎಂಬುದು ಮುಖ್ಯವಲ್ಲ. ನಾವು ಬದುಕಿದ್ದಾಗ ಮಾಡಿದ ಒಳ್ಳೆಯ ಕೆಲಸಗಳು ಮಾತ್ರ ಉಳಿಯುತ್ತವೆ. ನಾವು ಎಷ್ಟು ಒಳ್ಳೆಯ ಕೆಲಸ ಮಾಡುತ್ತೇವೋ ಅಷ್ಟು ಭಗವಂತ ನಮಗೆ ಒಳ್ಳೆಯದನ್ನು ಮಾಡುತ್ತಾನೆ ಎಂದರು.

ಜಿಪಂ ಮಾಜಿ ಉಪಾಧ್ಯಕ್ಷ ಸುರೇಂದ್ರ ನಾಯ್ಕ, ಗ್ರಾಮದ ಹಿರಿಯ ಮುಕುಂದಣ್ಣ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net