ರಾಜಾಂಗಣ-ರಥಬೀದಿ ಸಂಪರ್ಕಿಸುವ ಸುವರ್ಣ ಪಥಕ್ಕೆ ಭೂಮಿಪೂಜೆ

udp-15-mutt
Published on

ಉಡುಪಿ: ಕೃಷ್ಣ ಮಠಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ರಾಜಾಂಗಣ ಸಮೀಪದಿಂದ ರಥಬೀದಿ ಸಂಪರ್ಕಿಸುವ ಸುವರ್ಣ ಮೇಲ್ಸೇತುವೆ ಕಾಮಗಾರಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಶನಿವಾರ ಭೂಮಿಪೂಜೆ ನೆರವೇರಿಸಿದರು.

ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತಿರ್ಥ ಶ್ರೀಪಾದರು, ಕಿರಿಯ ಶ್ರೀ ಸುಶ್ರೀಂದ್ರ ತೀರ್ಥ ಸ್ವಾಮೀಜಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಜೋಷಿ ದಂಪತಿಗೆ ಕೋಟಿ ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದರು. ಕೋಟಿಗೀತಾಲೇಖನ ಯಜ್ಞದಲ್ಲಿ ದೀಕ್ಷಿತರಾಗಿ 110 ಬಾರಿ ಗೀತೆಯನ್ನು ಬರೆದ ನಿರ್ಮಲಾ ಕಾಮತ್​ ಹಾಗೂ 85 ಬಾರಿ ಗೀತೆಯನ್ನು ಬರೆದ ಶೋಭಾ ಕಿಣಿ ಶ್ರೀಪಾದರಿಗೆ ಪುಸ್ತಕಗಳನ್ನು ಸಮರ್ಪಿಸಿದರು. ಸಚಿವರ ಆಪ್ತ ಕಾರ್ಯದರ್ಶಿ ನಾರಾಯಣ ಗಂಭೀರ್​, ಮಠದ ದಿವಾನ್​ ನಾಗರಾಜ ಆಚಾರ್ಯ, ಕಾರ್ಯದರ್ಶಿ ಎಂ. ಪ್ರಸನ್ನ ಆಚಾರ್ಯ, ಶ್ರೀಗಳ ಆಪ್ತ ಕಾರ್ಯದರ್ಶಿ ರತೀಶ್​ ತಂತ್ರಿ, ಸಂತೋಷ್​ ಶೆಟ್ಟಿ, ಸುಗುಣ ಮಾಲಾ ಪತ್ರಿಕೆಯ ಸಂಪಾದಕ ಮಹಿತೋಷ್​ ಆಚಾರ್ಯ ಮುಂತಾದವರಿದ್ದರು. ಡಾ. ಬಿ.ಗೋಪಾಲಾಚಾರ್ಯ ಕಾರ್ಯಕ್ರಮ ನಿರೂಪಿಸಿದರು. ಮಠದಲ್ಲಿ ಮಧ್ಯಾಹ್ನ ಮಹಾಪೂಜೆ ವೀಸಿದ ಸಚಿವರು, ಕೃಷ್ಣಮುಖ್ಯಪ್ರಾಣ ದೇವರ ದರ್ಶನ ಪಡೆದು ಭೋಜನ ಪ್ರಸಾದವನ್ನು ಸ್ವೀಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net