ಪರ್ಯಾಯ ಶ್ರೀಗಳಿಗೆ ತಿರಂಗ ಧ್ವಜ ಹಸ್ತಾಂತರ

udp-9-tiranga
Published on

ಉಡುಪಿ: ಸ್ವಾತಂತ್ರೃ ಅಮೃತ ಮಹೋತ್ಸವ ಪ್ರಯುಕ್ತ ಹರ್‌ಘರ್ ತಿರಂಗ ಅಭಿಯಾನ ಅಂಗವಾಗಿ ಕೃಷ್ಣ ಮಠದಲ್ಲಿ ಪರ್ಯಾಯ ಮಠಾಧೀಶ ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿಯವರಿಗೆ ನಗರ ಸಭೆಯ ಅಧ್ಯಕ್ಷೆ ಸುಮಿತ್ರಾ ನಾಯಕ್ ತ್ರಿವರ್ಣಧ್ವಜ ನೀಡಿ, ಆ. 13 ರಿಂದ 15 ರವರೆಗೆ ಧಾರ್ಮಿಕ ಕೇಂದ್ರದ ಮೇಲೆ ರಾಷ್ಟ್ರಧ್ವಜ ಹಾರಿಸುವಂತೆ ವಿನಂತಿಸಿದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್. ಕಲ್ಮಾಡಿ, ಬಿಜೆಪಿ ಉಪಾಧ್ಯಕ್ಷ ಶ್ರೀಶ ನಾಯಕ್, ರವಿ ಅಮೀನ್, ನಗರಸಭಾ ಸದಸ್ಯ ಗಿರೀಶ್ ಎಂ. ಅಂಚನ್, ಸಾಮಾಜಿಕ ಚಿಂತಕ ಪ್ರದೀಪ್ ರಾವ್, ಬಿಜೆಪಿ ವಕ್ತಾರ ಕೆ.ರಾಘವೇಂದ್ರ ಕಿಣಿ ಉಪಸ್ಥಿತರಿದ್ದರು.

ತೆಂಕಪೇಟೆ ಲಕ್ಷ್ಮೀವೆಂಕಟೇಶ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಸಿಎ ಪಿ.ವಿ. ಶೆಣೈ ಮತ್ತು ಆಡಳಿತ ಮಂಡಳಿಯ ಸದಸ್ಯ ಪುಂಡಲಿಕ ಕಾಮತ್ ಇವರಿಗೆ ಶಾಸಕ ಕೆ.ರಘುಪತಿ ಭಟ್ ರಾಷ್ಟ್ರಧ್ವಜ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net