ಜ.9ರಿಂದ 15ರವರೆಗೆ ಕೃಷ್ಣ ಮಠದಲ್ಲಿ ಸಪ್ತೋತ್ಸವ

krishna mutt
Published on

ಉಡುಪಿ: ಕೃಷ್ಣ ಮಠದ ವಾರ್ಷಿಕ ಜಾತ್ರೆ ಸಪ್ತೋತ್ಸವ ಜ.9ರಿಂದ 15ರವರೆಗೆ ನಡೆಯಲಿದೆ. ಜ.9ರಂದು ಸಾಯಂಕಾಲ ಶ್ರೀಕೃಷ್ಣನ ಉತ್ಸವ ಮೂರ್ತಿಯನ್ನು ಸುವರ್ಣ ಪಲ್ಲಕ್ಕಿಯಲ್ಲಿರಿಸಿ ಮಧ್ವ ಸರೋವರದಲ್ಲಿ ತೆಪ್ಪೋತ್ಸವ ನಡೆಯಲಿದೆ. ಬಳಿಕ ರಥಬೀದಿಯಲ್ಲಿ ಮಹಾಪೂಜೆ ರಥದಲ್ಲಿ ಅನಂತೇಶ್ವರ ಮತ್ತು ಚಂದ್ರ ಮೌಳೀಶ್ವರ ದೇವರು, ಗರುಡ ರಥದಲ್ಲಿ ಕೃಷ್ಣ ಮುಖ್ಯಪ್ರಾಣ ದೇವರ ರಥೋತ್ಸವ ನಡೆಯಲಿದೆ.

ಮಕರ ಸಂಕ್ರಾಂತಿಗೆ ಮೂರು ರಥ
ಜ.14ರಂದು ಮಕರ ಸಂಕ್ರಾಂತಿಯಂದು ಸಾಯಂಕಾಲ ಶ್ರೀಕೃಷ್ಣ, ಮುಖ್ಯಪ್ರಾಣ ದೇವರಿಗೆ ಮಧ್ವ ಸರೋವರದಲ್ಲಿ ವೈಭವದ ತೆಪ್ಪೋತ್ಸವ ನಡೆಯಲಿದೆ. ಬಳಿಕ ರಥಬೀದಿಯಲ್ಲಿ ಬ್ರಹ್ಮರಥದಲ್ಲಿ ಕೃಷ್ಣನ ಉತ್ಸವ ಮೂರ್ತಿ ಪ್ರತಿಷ್ಠಾಪಿಸಲಾಗುತ್ತದೆ. ಸಣ್ಣರಥದಲ್ಲಿ ಮುಖ್ಯಪ್ರಾಣ ದೇವರು, ಗರುಡ ರಥದಲ್ಲಿ ಅನಂತೇಶ್ವರ ಮತ್ತು ಚಂದ್ರ ಮೌಳೀಶ್ವರ ದೇವರ ಮೂರ್ತಿಗಳನ್ನಿಟ್ಟು ಅಷ್ಟಮಠಾಧೀಶರ ಸಹಿತ ಭಕ್ತರು ತೇರನ್ನು ಎಳೆಯಲಿದ್ದಾರೆ. ರಥೋತ್ಸವ ವಿಶೇಷ ಆಕರ್ಷಣೆಯಾಗಿ ಸುಡುಮದ್ದು ಪ್ರದರ್ಶನ ನಡೆಯಲಿದೆ.

ಚೂಣೋರ್ತ್ಸವ
ಜ.15ರಂದು ಹಗಲು ರಥೋತ್ಸವ (ಚೂಣೋರ್ತ್ಸವ) ನಡೆಯಲಿದ್ದು, ಬೆಳಗ್ಗೆ 8.30ಕ್ಕೆ ಮಹಾಪೂಜೆ ಬಳಿಕ ಶ್ರೀಕೃಷ್ಣ ಹಾಗೂ ಮುಖ್ಯಪ್ರಾಣ ದೇವರನ್ನು ಬ್ರಹ್ಮರಥದಲ್ಲಿರಿಸಿ ಪರ್ಯಾಯ ಶ್ರೀಪಾದರ ಸಹಿತ ಅಷ್ಟಮಠದ ಯತಿಗಳು ಮಂಗಳಾರತಿ ಬೆಳಗಲಿದ್ದಾರೆ. ಬ್ರಹ್ಮರಥೋತ್ಸವ ಬಳಿಕ ವಸಂತ ಮಂಟಪದಲ್ಲಿ ಓಕುಳಿ ಪೂಜೆ, ಅಷ್ಟ ಮಠದ ಸ್ವಾಮೀಜಿಯವರಿಗೆ ಪರ್ಯಾಯ ಮಠದಿಂದ ಗೌರವ ಸಮರ್ಪಣೆ, ಮಧ್ವ ಸರೋವರದಲ್ಲಿ ಶ್ರೀಕೃಷ್ಣ ಮುಖ್ಯಪ್ರಾಣದೇವರ ಅವಭೃತೋತ್ಸವ ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net