ಕೃಷ್ಣಾ ನದಿಗೆ 1.44 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ

22LNG01
Published on

ಲಿಂಗಸುಗೂರು: ನಾರಾಯಣಪುರದ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 25 ಕ್ರಸ್ಟ್‌ಗೇಟ್‌ಗಳ ಮೂಲಕ 1,44,250 ಕ್ಯೂಸೆಕ್ ನೀರನ್ನು ಸೋಮವಾರ ಬಿಡಲಾಗಿದೆ.

ಆಲಮಟ್ಟಿ ಆಣೆಕಟ್ಟೆಯಿಂದ ಬಸವಸಾಗರ ಜಲಾಶಯಕ್ಕೆ 1.45 ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಬಸವಸಾಗರ ಜಲಾಶಯದ ಗರಿಷ್ಠ ನೀರಿನ ಸಂಗ್ರಹ ಸಾಮರ್ಥ್ಯ 492.252 ಮೀ. (33.31 ಟಿಎಂಸಿ) ಇದ್ದು, ಸೋಮವಾರ ನೀರಿನ ಮಟ್ಟ 491.01 ಮೀ. (27.887 ಟಿಎಂಸಿ) ಇತ್ತು. ಜಲಾಶಯದಿಂದ 1.50 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಹರಿಬಿಟ್ಟರೆ ತಾಲೂಕಿನ ಶೀಲಹಳ್ಳಿ ಸೇತುವೆ ಮುಳುಗಡೆಯಾಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net