ಕೃಷ್ಣಾ ನದಿಗೆ 60 ಸಾವಿರ ಕ್ಯೂಸೆಕ್ ನೀರು

27-DVD-3
Published on

ದೇವದುರ್ಗ: ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ ಶುಕ್ರವಾರ 61 ಸಾವಿರ ಕ್ಯೂಸೆಕ್ ನೀರು ಬಿಡಲಾಗಿದೆ.

ಜಲಾಶಯಕ್ಕೆ ಗುರುವಾರ 75 ಸಾವಿರ ಕ್ಯೂಸೆಕ್ ಒಳಹರಿವು ಇದ್ದು, ನದಿಗೆ 69,800 ಕ್ಯೂಸೆಕ್ ಹರಿಸಲಾಗಿತ್ತು. ತಡರಾತ್ರಿ ಒಳಹರಿವು ತಗ್ಗಿದ್ದರಿಂದ ಶುಕ್ರವಾರ ಬೆಳಗ್ಗೆ ಹೊರಹರಿವಿನ ಪ್ರಮಾಣವನ್ನು 61,100 ಕ್ಯೂಸೆಕ್‌ಗೆ ಇಳಿಸಲಾಗಿದೆ. 33.31 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ 32.84 ಟಿಎಂಸಿ ನೀರಿನ ಸಂಗ್ರಹವಿದೆ.

ಕೃಷ್ಣಾ ನದಿಗೆ 61 ಸಾವಿರ ಕ್ಯೂಸೆಕ್ ನೀರು ಹರಿಸಿದ್ದರಿಂದ ತಾಲೂಕಿನ ಐತಿಹಾಸಿಕ ಹೂವಿನಹೆಡಗಿ ಗಡ್ಡೆಗೂಳಿ ಬಸವೇಶ್ವರ ದೇವಸ್ಥಾನ ಮುಳುಗಡೆಯಾಗಿದೆ. ಎರಡು ದಿನಗಳಿಂದ ಪೂಜಾ ಕೈಂಕರ್ಯ ಸ್ಥಗಿತಗೊಂಡಿವೆ. ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿರುವುದರಿಂದ ರೈತರು ಜಾಗ್ರತೆ ವಹಿಸಬೇಕೆಂದು ಅಧಿಕಾರಿಗಳು ಎಚ್ಚರಿಸಿದ್ದಾರೆ. ನೀರಿನ ಪ್ರಮಾಣ ಹೆಚ್ಚಾಗಿರುವುದರಿಂದ ನದಿದಂಡೆ ಮೇಲಿದ್ದ ಪಂಪ್‌ಸೆಟ್‌ಗಳನ್ನು ರೈತರು ತೆರವುಗೊಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net