ಕೃಷ್ಣಾ ನದಿಯಲ್ಲಿ ತಗ್ಗಿದ ಪ್ರವಾಹ

1LNG02
Published on

ಲಿಂಗಸುಗೂರು: ನಾರಾಯಣಪುರದ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 30 ಕ್ರಸ್ಟ್ ಗೇಟ್‌ಗಳ ಮೂಲಕ 1,40,750 ಕ್ಯೂಸೆಕ್ ನೀರನ್ನು ಭಾನುವಾರ ಹರಿಬಿಡಲಾಗಿದ್ದು, ನದಿಯಲ್ಲಿ ಪ್ರವಾಹ ತಗ್ಗಿದ್ದರಿಂದ ನಡುಗಡ್ಡೆ ಹಳ್ಳಿಗಳಿಗೆ ಸಂಪರ್ಕಿಸುವ ಶೀಲಹಳ್ಳಿ ಸೇತುವೆ ಸಂಚಾರಕ್ಕೆ ಮುಕ್ತವಾಗಿದೆ.
ಆಲಮಟ್ಟಿ ಅಣೆಕಟ್ಟೆಯಿಂದ ಬಸವಸಾಗರ ಜಲಾಶಯಕ್ಕೆ 1.70 ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಬಸವಸಾಗರ ಜಲಾಶಯದ ಗರಿಷ್ಠ ನೀರಿನ ಸಂಗ್ರಹ ಸಾಮರ್ಥ್ಯ 492.252 ಮೀ. (33.31 ಟಿಎಂಸಿ) ಇದ್ದು, ಭಾನುವಾರ ನೀರಿನ ಮಟ್ಟ 490.99 ಮೀ. (27.807 ಟಿಎಂಸಿ) ಇತ್ತು. ನದಿಯಲ್ಲಿ ಪ್ರವಾಹ ಕಡಿಮೆಯಾದ ಪ್ರಯುಕ್ತ ಶೀಲಹಳ್ಳಿ ಸೇತುವೆ ಸಂಚಾರಕ್ಕೆ ಮುಕ್ತವಾಗಿದೆ. ಇದರಿಂದ ಯರಗೋಡಿ, ಕಡದರಗಡ್ಡಿ, ಹಂಚಿನಾಳ ಗ್ರಾಮಸ್ಥರಿಗೆ ಸಂಚಾರಕ್ಕೆ ಅನುಕೂಲವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net