ಕೃಷ್ಣ ನದಿ ನೀರಿನ ಮಟ್ಟ ಕೊಂಚ ಏರಿಕೆ

16Anand2
ಚಿಕ್ಕೋಡಿ ತಾಲೂಕಿನ ಬಾವನಸೌಂದತ್ತಿ ಬಳಿ ಕೃಷ್ಣ ನದಿ ನೀರಿನ ಮಟ್ಟ ಏರಿಕೆಯಾಗಿರುವುದು.
Published on

ಚಿಕ್ಕೋಡಿ: ಜಿಲ್ಲೆಯ ಚಿಕ್ಕೋಡಿ ಉಪವಿಭಾಗದಲ್ಲಿ ಒಂದು ವಾರದಿಂದ ಮಳೆ ಪ್ರಮಾಣ ತಗ್ಗಿದ್ದರಿಂದ ನದಿ ದಡದ ಜನತೆ ನಿರಾಳರಾಗಿದ್ದರು. ಆದರೆ ಮಹಾರಾಷ್ಟ್ರದ ಕೊಯ್ನ ಜಲಾಶಯದಿಂದ ನೀರು ಬಿಡುಗಡೆ ಮತ್ತೆ ನದಿಗಳ ನೀರಿನ ಮಟ್ಟ ಏರಿಕೆ ಕಂಡಿದೆ.

ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಿರಂತರ ಮಳೆಯಿಂದ 105 ಟಿಎಂಸಿ ಸಾಮರ್ಥ್ಯದ ಮಹಾರಾಷ್ಟ್ರದ ಕೊಯ್ನ ಜಲಾಶಯದಲ್ಲಿ ಸದ್ಯ 76 ಟಿಎಂಸಿ ಭರ್ತಿಯಾಗಿದೆ. ಮುಂಜಾಗ್ರತಾ ಕ್ರಮವಾಗಿ ಜಲಾಶಯದಿಂದ ಕೃಷ್ಣ ನದಿಗೆ 5 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಒಟ್ಟು 71 ಸಾವಿರ ಕ್ಯೂಸೆಕ್ ನೀರು ಕೃಷ್ಣ ನದಿಗೆ ಹರಿದು ಬರುತ್ತಿರುವ ಪರಿಣಾಮ ನದಿ ನೀರಿನ ಮಟ್ಟ ಮತ್ತೆ ಎರಡು ಅಡಿಯಷ್ಟು ಏರಿಕೆಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net