ವಿಜಯವಾಣಿ ಸುದ್ದಿಜಾಲ ಉಡುಪಿ
ಜಿಲ್ಲಾ ಕಾಂಗ್ರೆಸ್ನ ಸಕ್ರಿಯ ಕಾರ್ಯಕರ್ತ, ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದ ಕೃಷ್ಣ ಶೆಟ್ಟಿ ಬಜಗೋಳಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಕಾರ್ಕಳ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ಕಾರ್ಕಳ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ, ಜಿಲ್ಲಾ ಯುವ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿಯಾಗಿಯೂ ಈ ಮೊದಲು ಸೇವೆ ಸಲ್ಲಿಸಿದ್ದಾರೆ. ಹಲವಾರು ಹೋರಾಟಗಳಲ್ಲಿ ಮುಂಚೂಣಿಯಲ್ಲಿ ಪಾಲ್ಗೊಳ್ಳುವ ಮೂಲಕ ಹಾಗೂ ಹಲವು ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಜಿಲ್ಲೆಯ ಗಮನದ ಸೆಳೆದವರಾಗಿದ್ದಾರೆ.