

ಚಿಕ್ಕಬಳ್ಳಾಪುರ: ಶ್ರೀ ಕೃಷ್ಣನ ಜಯಂತಿಗೆ ನಿರ್ಬಂಧಿತ ರಜೆಯ ಬದಲಿಗೆ ಸರ್ಕಾರಿ ರಜೆ ಘೋಷಿಸುವುದರ ಬಗ್ಗೆ ಸರ್ಕಾರದ ಮೇಲೆ ಒತ್ತಡ ಹೇರುವುದಾಗಿ ಉನ್ನತ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಭರವಸೆ ನೀಡಿದರು.
ಚಿಕ್ಕಬಳ್ಳಾಪುರ ನಗರದ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಜಿಲ್ಲಾಡಳಿತ, ಜಿ.ಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯಾದವ ಕ್ಷೇಮಾಭಿವೃದ್ಧಿ ಸಂಘವು ಬುಧವಾರ ಆಯೋಜಿಸಿದ್ಧ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬದುಕಿನ ವಿವಿಧ ಆಯಾಮಗಳನ್ನು ತಿಳಿಸುವ ಭಗವದ್ಗೀತೆ ಒಂದು ವಿಶೇಷವಾದ ಶ್ರೇಷ್ಠ ಗ್ರಂಥ. ಇದರಲ್ಲಿ ಉಲ್ಲೇಖಿತವಾಗಿರುವ ಶ್ರೀಕೃಷ್ಣನು ಅರ್ಜುನನಿಗೆ ಬೋಧಿಸಿದ ವಿಚಾರಧಾರೆಗಳು ಎಲ್ಲ ಕಾಲಕ್ಕೂ ಪ್ರಸ್ತುತವಾದುದು. ಇವುಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳಡಿಸಿಕೊಳ್ಳಬೇಕು ಎಂದರು.
ಜಿಲ್ಲಾ ಕೇಂದ್ರದಲ್ಲಿ ಯಾದವ ಶ್ರೀ ಕೃಷ್ಣ ಸಮುದಾಯ ಭವನ ನಿರ್ಮಾಣಕ್ಕೆ ಹಿಂದುಳಿದ ವರ್ಗಗಳ ಇಲಾಖೆಯಿಂದ ಸರ್ಕಾರಿ ಜಾಗ ಮಂಜೂರಾತಿ ಇಲ್ಲವೇ ಸಂಘದ ಜಾಗವನ್ನು ಗುರುತಿಸಬೇಕಾ? ಎಂಬುದರ ಬಗ್ಗೆ ಸಮುದಾಯದ ನಾಯಕರು ಸಲ್ಲಿಸುವ ಮನವಿಯನ್ನಾಧಾರಿಸಿ ಜಿಲ್ಲಾಡಳಿತ ಕ್ರಮ ಕೈಗೊಳ್ಳಲಿದೆ ಎಂದರು.
ಶಾಸಕ ಪ್ರದೀಪ್ ಈಶ್ವರ್ ಮಾತನಾಡಿ, ದೇಶದ ಜನಸಂಖ್ಯೆಯ ಪೈಕಿ ಶೇ.20 ರಷ್ಟು ಯಾದವ ಸಮುದಾಯದವರು ಇದ್ದು ಯಾವುದೇ ಜನಾಂಗವು ಅಭಿವೃದ್ಧಿಯನ್ನು ಹೊಂದಲು ಹೆಚ್ಚಿನ ಸಂಖ್ಯೆಯಲ್ಲಿ ಜನ ಉನ್ನತ ಶಿಕ್ಷಣವನ್ನು ಪಡೆಯಬೇಕು ಎಂದರು.
ಸಚಿವರಿಗೆ ರಾಜ್ಯ ಯಾದವ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮನವಿ ಪತ್ರವನ್ನು ಸಲ್ಲಿಸಲಾಯಿತು.
ಈ ಸಂಧರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ಜಿ.ಪಂ.ಉಪ ಕಾರ್ಯದರ್ಶಿ ಡಾ.ಎನ್.ಭಾಸ್ಕರ್, ಉಪ ವಿಭಾಗಾಧಿಕಾರಿ ಡಿ.ಎಚ್.ಅಶ್ವಿನ್, ತಹಶೀಲ್ದಾರ್ ಅನೀಲ್ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಎನ್.ಮನೀಷ್, ರಾಜ್ಯ ಯಾದವ ಕ್ಷೇಮಾಭಿವೃದ್ಧಿ ಸಂಘದ ನಿರ್ದೇಶಕ ದೇವಿಶೆಟ್ಟಹಳ್ಳಿ ಎಂ.ಗಂಗಾಧರ್, ಜಿಲ್ಲಾಧ್ಯಕ್ಷ ಆರ್.ವೆಂಕಟೇಶ್, ತಾಲೂಕು ಅಧ್ಯಕ್ಷ ವಿ.ಮುನಿಕೃಷ್ಣಪ್ಪ, ಜಿ.ಪಂ.ಮಾಜಿ ಸದಸ್ಯ ಕೆ.ಎಂ.ಮುನೇಗೌಡ, ಮುಖಂಡರಾದ ನರಸಿಂಹ ಗೌಡ, ಕಿರಗಂಬಿ ದೇವರಾಜ್, ಮುತ್ತರಾಯಪ್ಪ ಮತ್ತಿತರರು ಇದ್ದರು.
ಬಾಕ್ಸ್
ಪ್ರತಿಭಾ ಪುರಸ್ಕಾರ
ಕಾರ್ಯಕ್ರಮದಲ್ಲಿ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಪಿ.ಎನ್.ನರಸಿಂಹರೆಡ್ಡಿ ಶ್ರೀ ಕೃಷ್ಣ ಜಯಂತಿ ಬಗ್ಗೆ ಉಪನ್ಯಾಸ ನೀಡಿದರು. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಸಮುದಾಯದ ಸಾಧಕರನ್ನು ಸನ್ಮಾನಿಸಲಾಯಿತು.
ಬಾಕ್ಸ್
ಕೃಷ್ಣನ ಮೆರವಣಿಗೆ
ಕಾರ್ಯಕ್ರಮಕ್ಕೂ ಮೊದಲು ಶ್ರೀ ಕೃಷ್ಣನ ಮೂರ್ತಿಯನ್ನೊಳಗೊಂಡ ಹೂವಿನ ಪಲ್ಲಕ್ಕಿಗಳು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದವು. ಸಮುದಾಯದ ಮುಖಂಡರು, ಇಲಾಖೆಯ ಅಽಕಾರಿಗಳು ಕಾಲ್ನಡಿಗೆಯಲ್ಲಿ ಸಾಗಿದರು. ಇದಕ್ಕೆ ಜಾನಪದ ವಿವಿಧ ಕಲಾ ತಂಡಗಳು ಸಾಥ್ ನೀಡಿದವು.
೬ಸಿಬಿಪಿ೧:
ಚಿಕ್ಕಬಳ್ಳಾಪುರದ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಆಯೋಜಿಸಿದ್ಧ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್, ಶಾಸಕ ಪ್ರದೀಪ್ ಈಶ್ವರ್, Áಜ್ಯ ಯಾದವ ಕ್ಷೇಮಾಭಿವೃದ್ಧಿ ಸಂಘದ ನಿರ್ದೇಶಕ ದೇವಿಶೆಟ್ಟಹಳ್ಳಿ ಎಂ.ಗಂಗಾಧರ್, ಜಿಲ್ಲಾಧ್ಯಕ್ಷ ಆರ್.ವೆಂಕಟೇಶ್, ಜಿ.ಪಂ.ಮಾಜಿ ಸದಸ್ಯ ಕೆ.ಎಂ.ಮುನೇಗೌಡ ಮತ್ತಿತರರು ಇದ್ದರು.
೬ಸಿಬಿಪಿ೧ಎ: ಮೆರವಣಿಗೆಯಲ್ಲಿ ಭಾಗವಹಿಸಿದ್ದ ಜನರು.