ಅಧ್ಯಕ್ಷರಾಗಿ ಕೃಷ್ಣಕುಮಾರ್ ನೇಮಕ

ಅಧ್ಯಕ್ಷರಾಗಿ ಕೃಷ್ಣಕುಮಾರ್ ನೇಮಕ
Published on

ಹನೂರು: ಕನ್ನಡ ಜಾನಪದ ಪರಿಷತ್ತಿನ ಹನೂರು ತಾಲೂಕು ಘಟಕದ ಅಧ್ಯಕ್ಷರಾಗಿ ಮಣಗಳ್ಳಿ ಗ್ರಾಮದ ಸಿ.ಕೆ. ಕೃಷ್ಣಕುಮಾರ್ ಅವರನ್ನು ನೇಮಕ ಮಾಡಲಾಗಿದೆ.

ಜಾನಪದ ಪರಿಷತ್ ರಾಜ್ಯಾದ್ಯಂತ ಜಾನಪದ ಕಲೆಗಳ ಕ್ಷೇತ್ರ ಕಾರ್ಯ ವಿಸ್ತರಣೆ, ದಾಖಲೀಕರಣ ಹಾಗೂ ತರಬೇತಿಯ ಮೂಲಕ ಜಾನಪದ ಕಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದೆ. ಇದೀಗ ಎಲ್ಲಾ ನಗರದಲ್ಲೂ ಕೇಂದ್ರಿತ ಜಾನಪದ ಚಟುವಟಿಕೆಗಳನ್ನು ನಿರ್ವಹಿಸಲು ತಾಲೂಕು ಮಟ್ಟದಲ್ಲಿ ಅಧ್ಯಕ್ಷರನ್ನು ನೇಮಕ ಮಾಡಲಾಗುತ್ತಿದ್ದು, ಚಾಮರಾಜನಗರ ಜಿಲ್ಲಾಧ್ಯಕ್ಷರ ಶಿಫಾರಸ್ಸಿನ ಮೇರೆಗೆ ಸಿ.ಕೆ. ಕೃಷ್ಣಕುಮಾರ್ ಅವರನ್ನು ನೇಮಕ ಮಾಡಲಾಗಿದೆ ಎಂದು ಪರಿಷತ್‌ನ ರಾಜ್ಯಾಧ್ಯಕ್ಷ ಡಾ.ಎಸ್.ಬಾಲಾಜಿ ಬುಧವಾರ ಆದೇಶ ಹೊರಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net