ಸುವರ್ಣ ಕರ್ನಾಟಕ ಕಣ್ಮಣಿ ಪ್ರಶಸ್ತಿಗೆ ಕೃಷ್ಣಮೂರ್ತಿ ಆಯ್ಕೆ

Oplus_0
Oplus_0
Published on

ಯಳಂದೂರು: ತಾಲೂಕಿನ ಗಣಿಗನೂರು ಗ್ರಾಮದ ಯುವ ಬರಹಗಾರ, ಸಾಹಿತ್ಯ ಕೃಷ್ಣಮೂರ್ತಿ ಅವರನ್ನು ಸುವರ್ಣ ಕರ್ನಾಟಕ ಕಣ್ಮಣಿ ಪ್ರಶಸ್ತಿಗೆ ಕಲಾ ಕುಂಚ ಸಂಸ್ಥೆ ಆಯ್ಕೆ ಮಾಡಿದೆ.

ಕರ್ನಾಟಕ 50 ವರ್ಷ ಪೂರೈಸಿದ ಸಂಭ್ರಮದಲ್ಲಿ ದಾವಣಗೆರೆಯಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಬೆಳ್ಳಿ ಸಂಭ್ರಮದ ಅಂಗವಾಗಿ ಪ್ರತಿಷ್ಠಿತ ಕಲಾ ಕುಂಚ ಸಂಸ್ಥೆ ವತಿಯಿಂದ ಕನ್ನಡ ನಾಡು-ನುಡಿ, ಕಲೆ, ಸಾಹಿತ್ಯ, ಸಂಗೀತ, ಶಿಕ್ಷಣ ಸಂಘಟನೆ ಹೀಗೆ ವಿವಿಧ ಲಲಿತ ಕಲಾ ಪ್ರಕಾರಗಳಲ್ಲಿನ ಸಾಧಕರನ್ನು ಆಯ್ಕೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಾಲೂಕಿನ ಗಣಿಗನೂರು ಗ್ರಾಮದ ಕೃಷ್ಣಮೂರ್ತಿ ಅವರ ಸಾಹಿತ್ಯ, ಕಲೆ ಸೇರಿದಂತೆ ಇತರ ಕ್ಷೇತ್ರದ ಸಾಧನೆ ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ದಾವಣಗೆರೆ ಜಿಲ್ಲೆಯ ಕಲಾ ಕುಂಚ ಸಂಸ್ಕೃತಿಕ ಸಂಸ್ಥೆಯ ಅಧ್ಯಕ್ಷ ಕೆ.ಎಚ್.ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net