ಕೃಷ್ಣಮಠದಲ್ಲಿ ಸೌರಯುಗಾದಿ

udp-15-yugadi 1
Published on

ಉಡುಪಿ: ಕೃಷ್ಣಮಠದಲ್ಲಿ ಸೌರಯುಗಾದಿ ಪ್ರಯುಕ್ತ ಶನಿವಾರ ಶ್ರೀಕೃಷ್ಣಮುಖ್ಯಪ್ರಾಣದೇವರ ಉತ್ಸವ ನಡೆಯಿತು.

ಪರ್ಯಾಯ ಕೃಷ್ಣಾಪುರ ಮಠಾಧೀಶ ಶ್ರೀವಿದ್ಯಾಸಾಗರತೀರ್ಥ ಸ್ವಾಮೀಜಿ, ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶತೀರ್ಥ ಸ್ವಾಮೀಜಿ, ಕಾಣಿಯೂರು ಮಠಾಧೀಶ ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮೀಜಿ, ಸೋದೆ ಮಠಾಧೀಶ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ, ಅದಮಾರು ಕಿರಿಯ ಮಠಾಧೀಶ ಶ್ರೀ ಈಶಪ್ರಿಯತೀರ್ಥ ಸ್ವಾಮೀಜಿ, ಪಲಿಮಾರು ಕಿರಿಯ ಮಠಾಧೀಶ ಶ್ರೀ ವಿದ್ಯಾರಾಜೇಶ್ವರತೀರ್ಥ ಸ್ವಾಮೀಜಿ ಹಾಗೂ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಸ್ವಾಮೀಜಿ ಉಪಸ್ಥಿತರಿದ್ದರು.

ನಂತರ ಚಂದ್ರಶಾಲೆಯಲ್ಲಿ ಪರ್ಯಾಯ ಮಠದ ವತಿಯಿಂದ ಶ್ರೀಪಾದರಿಗೆ ಗಂಧಾದಿ-ಉಪಚಾರಗಳೊಂದಿಗೆ ಗೌರವ ಕಾಣಿಕೆ ಸಲ್ಲಿಸಲಾಯಿತು. ಪರ್ಯಾಯ ಮಠದ ಪುರೋಹಿತ ಶ್ರೀನಿವಾಸ ಉಪಾಧ್ಯಾಯ ಇವರು ಶೋಭಕೃತ್ ನಾಮ ಸಂವತ್ಸರದ ಪಂಚಾಂಗ ಶ್ರವಣ ನೆರವೇರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net